
ರಾಯ್ಪುರ, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢ ರಾಜ್ಯದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಬಿಜಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ಘಟನೆ ದೃಢಪಡಿಸಿದ್ದಾರೆ.
ಜಂಗ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಇಂದ್ರಾವತಿ ನದಿಯ ಕಾಡು ಪ್ರದೇಶದಲ್ಲಿ ಮಾವೋವಾದಿಗಳ ಚಟುವಟಿಕೆ ಕುರಿತು ವಿಶ್ವಾಸಾರ್ಹ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಂಟಿ ಭದ್ರತಾ ಪಡೆಗಳು ಶೋಧ ಮತ್ತು ವಿರೋಧಿ ಕಾರ್ಯಾಚರಣೆ ಆರಂಭಿಸಿವೆ. ಕಾರ್ಯಾಚರಣೆ ವೇಳೆ ನಡೆದ ಎನ್ಕೌಂಟರ್ ನಂತರ ಸ್ಥಳದಲ್ಲಿ ನಡೆಸಿದ ಶೋಧದಲ್ಲಿ ಇಬ್ಬರು ಸಮವಸ್ತ್ರಧಾರಿ ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸ್ಥಳದಿಂದ ಒಂದು ಎಸ್ಎಲ್ಆರ್ ರೈಫಲ್, ಒಂದು ಐಎನ್ಎಸ್ಎಎಸ್ ರೈಫಲ್, 12 ಬೋರ್ ಬಂದೂಕು ಸೇರಿದಂತೆ ಸ್ಫೋಟಕ ವಸ್ತುಗಳು ಹಾಗೂ ದೈನಂದಿನ ಬಳಕೆಯ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ತಾರ್ ಇನ್ಸ್ಪೆಕ್ಟರ್ ಜನರಲ್ ಸುಂದರರಾಜ್ ಪಟ್ಟಲಿಂಗಂ ಮಾಹಿತಿ ನೀಡಿದ್ದು, ದಟ್ಟ ಕಾಡಿನ ಪ್ರಯೋಜನ ಪಡೆದು ಕೆಲವು ಮಾವೋವಾದಿಗಳು ಪರಾರಿಯಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa