
ಶಿವಮೊಗ್ಗ, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆಯಲ್ಲಿ ಮೊಪೆಡ್ನಲ್ಲಿ ಅಪಾಯಕಾರಿಯಾಗಿ ವೀಲಿಂಗ್ ನಡೆಸಿ, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಘಟನೆ ಗಮನಕ್ಕೆ ಬಂದ ತಕ್ಷಣ ಕ್ರಮ ಕೈಗೊಂಡ ಪೊಲೀಸರು, ಮೊಪೆಡ್ ಸವಾರನ ವಿರುದ್ಧ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಯಲ್ಲಿ ಗುನ್ನೆ ಸಂಖ್ಯೆ 22/2026 ದಾಖಲಿಸಿದ್ದಾರೆ.
ಸವಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆ 1988ರ ಕಲಂ 184 ಮತ್ತು 189ರಡಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa