ನೆಫ್ರೋ-ಯುರಾಲಜಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಹಮ್ಮದ್ ಮೊಹ್ಸಿನ್
ಬೆಂಗಳೂರು, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ ತರಲು ಮುಂದಾಗಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ನೆಫ್ರೋ-ಯುರಾಲಜಿ ಸಂಸ್ಥೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ಮಧ
Visit


ಬೆಂಗಳೂರು, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ ತರಲು ಮುಂದಾಗಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ನೆಫ್ರೋ-ಯುರಾಲಜಿ ಸಂಸ್ಥೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುರುವಾರ ಮಧ್ಯಾಹ್ನ ಆಗಮಿಸಿದ ಮೊಹಮ್ಮದ್ ಮೊಹ್ಸಿನ್, ವೈದ್ಯರ

ತಂಡದೊಂದಿಗೆ ಸಮಾಲೋಚನೆ ನಡೆಸಿದರು.

ಆಸ್ಪತ್ರೆಯ ಪರಿಸ್ಥಿತಿ, ನೀಡುತ್ತಿರುವ ಸೌಲಭ್ಯಗಳು ಹಾಗೂ ಸವಲತ್ತುಗಳ ಬಗ್ಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ಪಡೆದರು.

ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಸೂಕ್ತ ಚಿಕಿತ್ಸೆ ನೀಡುವಂತೆ ಮೊಹ್ಸಿನ್ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮೊಹ್ಸಿನ್, ಎಲ್ಲರಿಗೂ ಆರೋಗ್ಯ ಭಾಗ್ಯ ಒದಗಿಸಲು ನಾವು ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಮಹತ್ವ ಸುದಾರಣಾ ಕ್ರಮಗಳನ್ನು ಜಾರಿಗೆ ತರುತ್ತಿದೆ. ಅದನ್ನು ಸೂಕ್ತವಾಗಿ ಪಾಲಿಸಬೇಕಾದ ಅವಶ್ಯಕತೆ ಇದೆ ಎಂದರು.

ರೋಗಿಗಳೊಂದಿಗೆ ಸಂವಾದ ನಡೆಸಿದಾಗ ಹಲವಾರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆ ಹಾಗೂ ಸೌಲಭ್ಯಗಳು ತೃಪ್ತಿಕರವಾಗಿವೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ಮೊಹ್ಸಿನ್ ತಿಳಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದು ಎಂದು ಮೊಹ್ಸಿನ್ ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande