


ಬಳ್ಳಾರಿ, 27 ಫೆಬ್ರವರಿ (ಹಿ.ಸ.) :
ಆ್ಯಂಕರ್ : ದೆಹಲಿಯಲ್ಲಿ ನಡೆದ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ಪ್ರತಿಭಟನೆ ಮಾಡಿದ್ದನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಹಂಪಿ ರಮಣ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಭಾರತ ದೇಶದ ಸಂಸ್ಕೃತಿಯನ್ನು ಜಗತ್ತಿನ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಹರಾಜು ಹಾಕಿದ್ದಾರೆ. ಇವರುಗಳಿಗೆ ಕಠಿಣವಾದ ಶಿಕ್ಷೆ ಆಗಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್