
ಬೆಂಗಳೂರು, 27 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ ಅವರು ನಾಡು ಕಂಡಂತಹ ಅತ್ಯಂತ ಶ್ರೇಷ್ಠ, ಧೀಮಂತ ನಾಯಕರು. ಅವರು ಮುಖ್ಯಮಂತ್ರಿಯಾಗಿ ಮಾಡಿರುವ ಕಾರ್ಯಗಳು ಆಡಳಿತಗಾರರಿಗೆ ಸ್ಪೂರ್ತಿಯಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಯಡಿಯೂರಪ್ಪ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಎಕ್ಸ ಮೂಲಕ ಹುಟ್ಟು ಹಬ್ಬದ ಶುಭಾಶಯ ತಿಳಿಸಿರುವ ಅವರು, ಯಡಿಯೂರಪ್ಪ ಅವರು, ರೈತ ಪರ ಜನ ಪರ ಹೋರಾಟದ ಮೂಲಕ ರಾಜ್ಯದ ಜನರ ಮನ ಗೆದ್ದವರು. ಅವರು ಮುಖ್ಯಮಂತ್ರಿ ಆಗಿ ಮಕ್ಕಳಿಗೆ ಯುವಕರಿಗೆ ಮಹಿಳೆಯರಿಗೆ ಮಾಡಿರುವ ಕೆಲಸ ಸದಾ ಕಾಲ ಆಡಳಿತಗಾರರಿಗೆ ಸ್ಫೂರ್ತಿಯಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿರುವ ಯಡಿಯೂರಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ನಾಡಿನ ಸೇವೆ ಮಾಡಿರುವುದು ಚಿರಸ್ಮರಣೀಯ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರಿಗೆ ಭಗವಂತ ಹೆಚ್ಚಿನ ಆರೋಗ್ಯ ಆಯುಷ್ಯ ಶಕ್ತಿಯನ್ನು ಕೊಟ್ಟು ಇನ್ನಷ್ಟು ನಾಡ ಸೇವೆ ಮಾಡುವಂತ ಅವಕಾಶ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa