


ಕೊಪ್ಪಳ, 27 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಸರ್ಗಳ ಸ್ವಾಸ್ಥ್ಯ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ
ಗಳ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮಕ್ಕೆ ಕೊಪ್ಪಳ ಸಂಸದರಾದ ಕೆ.ರಾಜಶೇಖರ್ ಬಸವರಾಜ ಹಿಟ್ನಾಳ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿಶೇಷ ಚೇತನರ ಸ್ವಾವಲಂಬನೆ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರವು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಇದರ ಭಾಗವಾಗಿ ಇಂದು ಜಿಲ್ಲೆಯಲ್ಲಿ ವಿತರಣೆ ಮಾಡಲಾದ ಮೋಟಾರು ಚಾಲಿತ ತ್ರಿಚಕ್ರ ವಾಹನಗಳು, ಈ ಫಲಾನುಭವಿಗಳ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗಲಿವೆ. ಶಿಕ್ಷಣ, ಉದ್ಯೋಗ ಹಾಗೂ ಸ್ವಯಂ ಉದ್ಯಮ ಚಟುವಟಿಕೆಗಳಿಗೆ ಈ ವಾಹನಗಳು ಸಹಕಾರಿಯಾಗಲಿವೆ ಮತ್ತು ವಿಶೇಷ ಚೇತನರು ಆತ್ಮವಿಶ್ವಾಸದಿಂದ ಬದುಕನ್ನು ಸಾಗಿಸಲು ಈ ವಾಹನಗಳು ಅವರಿಗೆ ನೆರವಾಗಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಕೊಪ್ಪಳ ಕಾರ್ಖಾನೆ ಮತ್ತು ಬಾಯ್ಲರ್ಗಳ ಸ್ವಾಸ್ಥ್ಯ ಇಲಾಖೆಯ ಸಹಾಯಕ ನಿರ್ದೇಶಕ ವಿಜಯಕುಮಾರ ಬಿ., ಗಂಗಾವತಿ ಕಾರ್ಮಿಕ ನಿರೀಕ್ಷಕ ಎಂ.ಅಶೋಕ, ಕೊಪ್ಪಳ ಕಾರ್ಮಿಕ ನಿರೀಕ್ಷಕಿ ಮಂಜುಳಾ ವಿಶ್ವನಾಥ, ಕುಷ್ಟಗಿ ಕಾರ್ಮಿಕ ನಿರೀಕ್ಷಕಿ ನಿವೇದಿತಾ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇತರೆ ಜನಪ್ರತಿನಿಧಿಗಳು, ವಿಶೇಷ ಚೇತನರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್