ಟೀಕೆಗಳಿಗೆ ಜಗ್ಗದೆ ಸರಕಾರ ಕೆಲಸ:ಪರಮೇಶ್ವರ
ತುಮಕೂರು, 27 ಫೆಬ್ರವರಿ (ಹಿ.ಸ.): ಆ್ಯಂಕರ್: ತುಮಕೂರು ನಗರದ ಅಮಾನಿಕೆರೆ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರದ ಕಾರ್ಯಕ್ರಮವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬ
ಪರಮೇಶ್ವರ


ತುಮಕೂರು, 27 ಫೆಬ್ರವರಿ (ಹಿ.ಸ.):

ಆ್ಯಂಕರ್:

ತುಮಕೂರು ನಗರದ ಅಮಾನಿಕೆರೆ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರದ ಕಾರ್ಯಕ್ರಮವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಡತನ ನಿರ್ಮೂಲನೆಯಾಗಬೇಕು. ಜನ ಸಮುದಾಯ ಶಾಂತಿ, ನೆಮ್ಮದಿಯಿಂದ ಜೀವನ ನಡೆಸಬೇಕು. ಹಳ್ಳಿಗಾಡಿನ ಯುವಕರು ಹೆಚ್ಚು ವಿದ್ಯಾವಂತರಾಗಿ, ದೇಶವನ್ನು ಕಟ್ಟುವಂತಾಗಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಯಾವುದೇ ರೀತಿಯ ಟೀಕೆಗಳಿಗೆ ಜಗ್ಗದೆ ಕೆಲಸ ಮಾಡಲಾಗುತ್ತಿದೆ. ರಾಜ್ಯದ ಜನರನ್ನು ಅಭಿವೃದ್ಧಿಯ ಕಡೆ ತೆಗೆದುಕೊಂಡು ಹೋಗುವುದೇ ಸರ್ಕಾರದ ಜವಾಬ್ದಾರಿ.

ನಮ್ಮ‌ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ವಿಶ್ವದ ಅನೇಕ ಅರ್ಥಿಕ ತಜ್ಞರು ಕೊಂಡಾಡುತ್ತಿದ್ದಾರೆ. ಎಷ್ಟೇ ಟೀಕೆ ಟಿಪ್ಪಣಿಗಳು ಬಂದರು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ.

ಗ್ಯಾರಂಟಿ ಯೋಜನೆಗಳ ಜೊತೆಗೆ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಶೀಘ್ರ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಯುವಕರ ಪರವಾಗಿ ಯೋಜನೆಗಳನ್ನು ಕೊಟ್ಟಿದ್ದೇವೆ. ಉದ್ಯೋಗವನ್ನು ಕೊಡುತ್ತೇವೆ ಎಂದು ತಿಳಿಸಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರು, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ಅವರು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ, ತುಮಕೂರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್‌ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಜಿಲ್ಲಾಧಿಕಾರಿ ಶುಭ ಕಲ್ಯಾಣ, ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ವಿ.ಅಶ್ವಿಜ, ಎಸ್‌ಪಿ ಅಶೋಕ್ ಮುಂತಾದವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande