ಬಿಜೆಪಿ ಜೊತೆ ಮೈತ್ರಿ : ಎಚ್.ಡಿ. ಕುಮಾರಸ್ವಾಮಿ
ವಿಜಯಪುರ, 27 ಫೆಬ್ರವರಿ (ಹಿ.ಸ.) : ಆ್ಯಂಕರ್ : ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಮನಸ್ಸು ಇಲ್ಲ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲಕ್ಷಾಂತರ ಖಾಲಿ ಹುದ್ದೆಗಳು ಇವೆ. ಆದ್ರೇ, ಸರ್ಕಾರ ಮಾತ್ರ ವಿದ್ಯಾ
ಬಿಜೆಪಿ ಜೊತೆ ಮೈತ್ರಿ : ಎಚ್.ಡಿ. ಕುಮಾರಸ್ವಾಮಿ


ವಿಜಯಪುರ, 27 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಮನಸ್ಸು ಇಲ್ಲ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲಕ್ಷಾಂತರ ಖಾಲಿ ಹುದ್ದೆಗಳು ಇವೆ. ಆದ್ರೇ, ಸರ್ಕಾರ ಮಾತ್ರ ವಿದ್ಯಾರ್ಥಿಗಳ ಜೊತೆಗೆ ಚೆಲ್ಲಾಟ ಆಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದರು.

ಇನ್ನು ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಇದೀಗ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜ್ಞಾನೋದಯ ಆಗಿದೆ. ಗ್ಯಾರಂಟಿಯಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ ಎಂದಿದ್ದಾರೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕಡೆಗೆ ಗಮನ ಕೊಡಬೇಕು ಎಂದರು.

ಅಲ್ಲದೇ, ಮುಂದಿನ ಚುನಾವಣೆ ಬಿಜೆಪಿ ಜೊತೆಗೆ ಮೈತ್ರಿಯೊಂದಿಗೆ ಚುನಾವಣೆ ಸ್ಪರ್ಧೆ ಮಾಡುತ್ತೇವೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande