ಪಂಜಾಬ್ ಪೊಲೀಸ್ ಕಾರ್ಯಾಚರಣೆ ; ಅಕ್ರಮ ಶಸ್ತ್ರಾಸ್ತ್ರ ವಶ,ಇಬ್ಬರ ಬಂಧನ
ಚಂಡೀಗಡ, 27 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬ್ ಪೊಲೀಸ್ ಮೊಗಾ ಘಟಕವು ಇಬ್ಬರು ಆರೋಪಿಗಳನ್ನು ಬಂಧಿಸಿ ಐದು ಅಕ್ರಮ ಶಸ್ತ್ರಾಸ್ತ್ರಗಳನ್ನು ಮದ್ದುಗುಂಡುಗಳೊಂದಿಗೆ ವಶಪಡಿಸಿಕೊಂಡಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ಮೋಗಾ ಪೋಲಿಸರು ನಡೆಸಿದ ಕಾರ್ಯಾಚರಣೆಯಲ್ಲಿ 3 ಪಿಸ್
Weapons


ಚಂಡೀಗಡ, 27 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬ್ ಪೊಲೀಸ್ ಮೊಗಾ ಘಟಕವು ಇಬ್ಬರು ಆರೋಪಿಗಳನ್ನು ಬಂಧಿಸಿ ಐದು ಅಕ್ರಮ ಶಸ್ತ್ರಾಸ್ತ್ರಗಳನ್ನು ಮದ್ದುಗುಂಡುಗಳೊಂದಿಗೆ ವಶಪಡಿಸಿಕೊಂಡಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ಮೋಗಾ ಪೋಲಿಸರು ನಡೆಸಿದ ಕಾರ್ಯಾಚರಣೆಯಲ್ಲಿ 3 ಪಿಸ್ತೂಲ್ಗಳು (.30 ಬೋರ್), 1 ಪಿಸ್ತೂಲ್ (.32 ಬೋರ್) ಮತ್ತು 1 ಗ್ಲಾಕ್ 9 ಮಿಮೀ ಪಿಸ್ತೂಲ್ ಸೇರಿ ಒಟ್ಟು 5 ಅಕ್ರಮ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಬಂಧಿತ ಆರೋಪಿ ಲಖ್ವಿಂದರ್ ಸಿಂಗ್ ಪಾಕಿಸ್ತಾನ ಮೂಲದ ವ್ಯಕ್ತಿಯ ಸೂಚನೆ ಮೇರೆಗೆ ಕೆಲಸ ಮಾಡುತ್ತಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ಮುಂದುವರಿದಿದೆ.

ಈ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಮುಂದಿನ ಹಾಗೂ ಹಿಂದಿನ ಸಂಪರ್ಕಗಳನ್ನು ಪತ್ತೆಹಚ್ಚಲು ತನಿಖೆ ವಿಸ್ತರಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande