ಕುರೇಕುಪ್ಪ : ಶೌಚಾಲಯ ನಿರ್ಮಾಣ, ಅರ್ಜಿ ಆಹ್ವಾನ
ಬಳ್ಳಾರಿ, 27 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕುರೇಕುಪ್ಪ ಪುರಸಭೆ ವತಿಯಿಂದ 2019-20ನೇ ಸಾಲಿನ ಎಸ್ಸಿಎಸ್ಪಿ ಯೋಜನೆಯಡಿ ಬಾಕಿ ಉಳಿದ ಮೊತ್ತಕ್ಕೆ ಅರ್ಹ ಫಲಾನುಭವಿಗಳಿಂದ ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಪುನಃ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದ
ಕುರೇಕುಪ್ಪ : ಶೌಚಾಲಯ ನಿರ್ಮಾಣ, ಅರ್ಜಿ ಆಹ್ವಾನ


ಬಳ್ಳಾರಿ, 27 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕುರೇಕುಪ್ಪ ಪುರಸಭೆ ವತಿಯಿಂದ 2019-20ನೇ ಸಾಲಿನ ಎಸ್ಸಿಎಸ್ಪಿ ಯೋಜನೆಯಡಿ ಬಾಕಿ ಉಳಿದ ಮೊತ್ತಕ್ಕೆ ಅರ್ಹ ಫಲಾನುಭವಿಗಳಿಂದ ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಪುನಃ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಮಾ.07 ಕೊನೆಯ ದಿನವಾಗಿದೆ.

ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಇತ್ತೀಚಿನ ಭಾವ ಚಿತ್ರ ಹಾಗೂ ಮನೆಗೆ ಸಂಬಂಧಿಸಿದ ತೆರಿಗೆ ರಶೀದಿ, ನಮೂನೆ-03, ಜೆರಾಕ್ಸ್ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande