

ಕೊಪ್ಪಳ, 27 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಸಮುದಾಯದವರ ಅಭಿಪ್ರಾಯದಂತೆ ಮಾರ್ಚ್ 3 ರಂದು ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯನ್ನು ಸರಳವಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ ಕುರಿತಾದ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯನ್ನು ಮಾರ್ಚ್ 3 ರಂದು ಸರಳವಾಗಿ ಆಚರಿಸಬೇಕೆಂಬ ಸಮುದಾಯಗಳ ಮುಖಂಡರ ಕೋರಿಕೆ ಮೇರೆಗೆ ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಪ್ಪಾರ್ಚನೆ ಮಾಡಿ ಗೌರವಿಸಲಾಗುವುದು. ಜಯಂತಿ ನಿಮಿತ್ತ ಜಿಲ್ಲಾಡಳಿತ ಭವನದಲ್ಲಿ ನಡೆಯುವ ಪೂಜಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ್, ಅರಣ್ಯ ಇಲಾಖೆಯ ಮಲ್ಲಿಕಾರ್ಜುನ ಬಿ ಗೌಡರ್, ಕೃಷಿ ಇಲಾಖೆಯ ಸತ್ಯ ನಾರಾಯಣ, ಸಹಾಯಕ ಅರಣ್ಯ ಇಲಾಖೆಯ ದ್ರಾಕ್ಷಾಯಿಣಿ ಎಂ. ಕೆ., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ತಿಪ್ಪಯ್ಯ ನಾಯ್ಡು, ಸಮಾಜ ಕಲ್ಯಾಣ ಇಲಾಖೆಯ ಅಜಯ್ ಸಿಂಗ್, ಸಮಾಜದ ಮುಖಂಡರಾದ ಶ್ರೀನಿವಾಸ ಕಟ್ಟಿಮನಿ, ಗೀರಿಶ್ ಕನಕಗಿರಿ, ವೆಂಕಟೇಶ್ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್