ಜೆಡಿಎಸ್ ಸಮಾವೇಶದ ಸಿದ್ಧತೆ ವೀಕ್ಷಿಸಿದ ನಿಖಿಲ್ ಕುಮಾರಸ್ವಾಮಿ
ವಿಜಯಪುರ, 27 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಸಿಂದಗಿ ಬೈ ಪಾಸ್ ಬಳಿಯ ಸೇವಾಲಾಲ್ ವೃತ್ತದ ಬಳಿ ಇಂದು ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಜನತಾ ಸಮಾವೇಶ ಕಿತ್ತೂರು ಕರ್ನಾಟಕ ಹಾಗೂ ಬೆಳ್ಳಿ ಹಬ್ಬದ ಸಂಭ್ರಮ ಕಾರ್ಯಕ್ರಮದ ಅಂತಿಮ ಸಿದ್ಧತೆಗಳನ್ನು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖ
ನಿಖಿಲ


ವಿಜಯಪುರ, 27 ಫೆಬ್ರವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಸಿಂದಗಿ ಬೈ ಪಾಸ್ ಬಳಿಯ ಸೇವಾಲಾಲ್ ವೃತ್ತದ ಬಳಿ ಇಂದು ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಜನತಾ ಸಮಾವೇಶ ಕಿತ್ತೂರು ಕರ್ನಾಟಕ ಹಾಗೂ ಬೆಳ್ಳಿ ಹಬ್ಬದ ಸಂಭ್ರಮ ಕಾರ್ಯಕ್ರಮದ ಅಂತಿಮ ಸಿದ್ಧತೆಗಳನ್ನು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇವರು ಇಂದು ಬೆಳಿಗ್ಗೆ ಹಿರಿಯ ನಾಯಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಪರಿಶೀಲನೆ ನಡೆಸಿದರು.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಹೆಚ್ಚು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕರ್ತ ಬಂಧುಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಅವರು, ಬಂಡೆಪ್ಪ ಕಾಶಂಪೂರ, ಕೋರ ಕಮಿಟಿ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಅವರು, ಶಾಸಕರಾದ ರಾಜುಗೌಡ ಪಾಟೀಲ್, ಶರಣಗೌಡ ಕಂದಕೂರು, ಸಿ.ಎನ್. ಬಾಲಕೃಷ್ಣ ಅವರು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande