ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ತಡೆ
ನವದೆಹಲಿ, 27 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸರ್ವೋಚ್ಚ ತಡೆಯಾಜ್ಞೆ ನೀಡಿದ್ದು, ಅವರಿಗೆ ತಾತ್ಕಾಲಿಕ ನಿರಾಳತೆ ದೊರೆತಿದೆ. ಹೈಕೋರ್ಟ್
Subbareddy


ನವದೆಹಲಿ, 27 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸರ್ವೋಚ್ಚ ತಡೆಯಾಜ್ಞೆ ನೀಡಿದ್ದು, ಅವರಿಗೆ ತಾತ್ಕಾಲಿಕ ನಿರಾಳತೆ ದೊರೆತಿದೆ.

ಹೈಕೋರ್ಟ್ ಸುಬ್ಬಾರೆಡ್ಡಿ ಅವರ ನಾಮಪತ್ರದಲ್ಲಿ ಆಸ್ತಿ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಬಿಜೆಪಿ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಪರಿಗಣಿಸಿ ಹೈಕೋರ್ಟ್ ಈ ಆದೇಶ ನೀಡಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಸುಬ್ಬಾರೆಡ್ಡಿಗೆ ಈಗಿನ ತಡೆಯಾಜ್ಞೆ ಕಾನೂನು ಹೋರಾಟದಲ್ಲಿ ಮೊದಲ ಗೆಲುವಾಗಿ ಪರಿಣಮಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ತಿಂಗಳಿಗೆ ಮುಂದೂಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande