ವಚನ ವಿಶ್ವವಿದ್ಯಾಲಯ ಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಮನವಿ
ಬೆಂಗಳೂರು, 27 ಫೆಬ್ರವರಿ (ಹಿ.ಸ.): ಆ್ಯಂಕರ್: ಬಸವಾದಿ ಶರಣರ ವಚನಗಳಲ್ಲಿನ ಮಾನವೀಯ ಹಾಗೂ ಸಾಮಾಜಿಕ ಆಶಯಗಳನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಯ ಅಗತ್ಯತೆ ಇದೆ. ಈ ಸಂಬಂಧ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಸಚಿವ
ಮನವಿ


ಬೆಂಗಳೂರು, 27 ಫೆಬ್ರವರಿ (ಹಿ.ಸ.):

ಆ್ಯಂಕರ್:

ಬಸವಾದಿ ಶರಣರ ವಚನಗಳಲ್ಲಿನ ಮಾನವೀಯ ಹಾಗೂ ಸಾಮಾಜಿಕ ಆಶಯಗಳನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಯ ಅಗತ್ಯತೆ ಇದೆ. ಈ ಸಂಬಂಧ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಸಚಿವ ಎಂ.ಬಿ.ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕಳೆದ ವರ್ಷ ಅಕ್ಟೋಬರ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯಂತೆ ಬಸವಕಲ್ಯಾಣದಲ್ಲಿ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಯಿತು.

ನಿಯೋಗದಲ್ಲಿ ಸ್ವಾಮೀಜಿಗಳಾದ ನಾಡೋಜ ಬಸವಲಿಂಗ ಪಟ್ಟದ್ದದೇವರು, ಡಾ. ತೋಂಟದ ಸಿದ್ದರಾಮ ಸ್ವಾಮಿಗಳು, ಗುರುಮಹಾಂತಾ ಸ್ವಾಮಿಗಳು, ಪ್ರಭುಚನ್ನಬಸವ ಸ್ವಾಮೀಜಿ, ಸಚಿವ ಈಶ್ವರ ಖಂಡ್ರೆ, ಹಿರಿಯ ಶಾಸಕರಾದ ಬಿ.ಆರ್. ಪಾಟೀಲ್, ಸಮಾಜದ ಮುಖಂಡರು ಹಾಗೂ ಹಿರಿಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande