ಮೃತ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ತಡೆಗೆ ಕ್ರಮ: ಆರ್. ಶಿವಣ್ಣ ಸೂಚನೆ
ಚಿತ್ರದುರ್ಗ, 27 ಫೆಬ್ರವರಿ (ಹಿ.ಸ.): ಆ್ಯಂಕರ್: ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಹಣ ಪಾವತಿಯಾಗುವುದನ್ನು ತಕ್ಷಣ ತಡೆಯಬೇಕು ಎಂದು ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನ
Meeting


ಚಿತ್ರದುರ್ಗ, 27 ಫೆಬ್ರವರಿ (ಹಿ.ಸ.):

ಆ್ಯಂಕರ್:

ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಹಣ ಪಾವತಿಯಾಗುವುದನ್ನು ತಕ್ಷಣ ತಡೆಯಬೇಕು ಎಂದು ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೃತಪಟ್ಟವರ ವಿವರ ಸಂಗ್ರಹಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಲೆಕ್ಕಿಗರ ನೆರವು ಪಡೆದು ಮರಣ ಪ್ರಮಾಣಪತ್ರಗಳ ಆಧಾರದಲ್ಲಿ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ 3,98,667 ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದು, 3,86,770 ಮಂದಿಗೆ ಹಣ ತಲುಪಿದೆ (ಶೇ.97 ಪ್ರಗತಿ) ಎಂದರು. ಮೃತಪಟ್ಟ 8,843 ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ನಡೆಯುತ್ತಿದೆ; ಪರಿಶೀಲನೆ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಅನ್ನಭಾಗ್ಯ ಅಕ್ಕಿ ದಂಧೆ ಆರೋಪ: ಗ್ರಾಮೀಣ ಪ್ರದೇಶಗಳಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಖರೀದಿಸಿ ಮರುಮಾರಾಟ ಮಾಡುವ ದಂಧೆ ನಡೆಯುತ್ತಿದೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಬಳಸಿ ಅಕ್ಕಿ ಪಡೆಯುತ್ತಿರುವುದರಿಂದ ನಿಜವಾದ ಬಡವರಿಗೆ ಅನ್ಯಾಯವಾಗುತ್ತಿದೆ ಎಂದು ಸೂಚಿಸಿದರು. ಪ್ರತಿಯೊಂದು ನ್ಯಾಯಬೆಲೆ ಅಂಗಡಿಯಲ್ಲಿ ಯೋಜನೆಗಳ ಮಾಹಿತಿ ಫಲಕ ಕಡ್ಡಾಯಗೊಳಿಸಬೇಕು ಎಂದರು.

ಮಹಿಳಾ ದಿನಾಚರಣೆ ಸಂಭ್ರಮ: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿ ಮಹಿಳೆಯರನ್ನು ಒಗ್ಗೂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಲಾಯಿತು. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 550 ಕೋಟಿಗೂ ಅಧಿಕ ಮಹಿಳೆಯರು ಪ್ರಯೋಜನ ಪಡೆದಿರುವುದಾಗಿ ತಿಳಿಸಲಾಯಿತು. ಯುವನಿಧಿ ಯೋಜನೆ ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಒದಗಿಸಿ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande