6ನೇ ತರಗತಿ ಪ್ರವೇಶಾತಿ ಪರೀಕ್ಷೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ, 28 ಫೆಬ್ರವರಿ (ಹಿ.ಸ.): ಆ್ಯಂಕರ್: ವಿಜಯಪುರ ಜಿಲ್ಲೆಯಲ್ಲಿ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯು ಇದೇ ಮಾರ್ಚ್ 1 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕಿನ 45 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಯಾವುದೇ ಪರೀಕ್ಷಾ ಲೋಪವಾಗ
ಪರೀಕ್ಷೆ


ವಿಜಯಪುರ, 28 ಫೆಬ್ರವರಿ (ಹಿ.ಸ.):

ಆ್ಯಂಕರ್: ವಿಜಯಪುರ ಜಿಲ್ಲೆಯಲ್ಲಿ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯು ಇದೇ ಮಾರ್ಚ್ 1 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕಿನ 45 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಯಾವುದೇ ಪರೀಕ್ಷಾ ಲೋಪವಾಗದಂತೆ ಸುಸೂತ್ರವಾಗಿ ಹಾಗೂ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಸಮಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅವರು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರಿಕ್ಷಾ ಸಿದ್ಧತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 6ನೇ ತರಗತಿಯ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ 13 ತಾಲೂಕಿನ 45 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 18,741 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಯಾವುದೇ ಸಮಸ್ಯೆಬಾರದ ರೀತಿಯಲ್ಲಿ ಮುಂಜಾಗ್ರತೆಯಿಂದ ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಚಿಕ್ಕ ಮಕ್ಕಳು ಪರೀಕ್ಷೆಗಳನ್ನು ಬರೆಯುತ್ತಿದ್ದು,ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕೊಠಡಿಗಳ ಸುವ್ಯವಸ್ಥೆತೆಯಿಂದ ಇರುವಂತೆ ನೊಡಿಕೊಳ್ಳಬೇಕು. ಪರೀಕ್ಷಾ ದಿನಗಳಂದು ಶುದ್ದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸರ್ಮಪಕವಾದ ಬೆಳಕು ಹಾಗೂ ವಿದ್ಯುತ್ ವ್ಯತ್ಯಯವಾಗದಂತೆ ಎಲ್ಲಾ ಅಗತ್ಯ ಸಿದ್ಧತೆಗಳ ಮುಂಜಾಗ್ರತೆ ವಹಿಸಬೇಕು. ಪರೀಕ್ಷಾ ಕೊಠಡಿಯೊಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು, ಕ್ಯಾಲ್ಕುಲೇಟರ್, ಲಾಗ್ ಟೇಬಲ್, ಮೊಬೈಲ್ ಫೋನ್ಗಳು, ಬ್ಲೂಟೂತ್, ವೈಯರಲೆಸ್ ಸೆಟ್ಸ್ಗಳನ್ನು ತರುವುದು ನಿಷೇಧಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳನ್ನು 18 ಮಾರ್ಗಾಧಿಕಾರಿಗಳ ತಂಡಕ್ಕೆ ಹಸ್ತಾಂತರಿಸಲು ಅಪರ ಜಿಲ್ಲಾಧಿಕಾರಿಗಳು, ಉಪ ನಿರ್ದೇಶಕರು ಜಿಲ್ಲಾ ಖಜಾನೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನೊಳಗೊಂಡ ಸಮಿತಿ ನೇಮಕ ನೇಮಿಸಲಾಗಿದೆ.

ಒಟ್ಟು 18 ಪರೀಕ್ಷಾ ಕೇಂದ್ರದ ಮಾರ್ಗಗಳಿದ್ದು, ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ತಂಡಕ್ಕೆ ತಲಾ ಓರ್ವ ಸಶಸ್ತ್ರ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲೆಯ 45 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತಿಗಾಗಿ ಅವಶ್ಯಕತೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಮತ್ತು ಪರೀಕ್ಷೆ ಮುಕ್ತಾಯದ ನಂತರ ಉತ್ತರ ಪತ್ರಿಕೆ ಬಂಡಲ್ಗಳನ್ನು ಸಾಗಿಸಲು ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಯಿತು.

ಪರೀಕ್ಷಾ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ ಕಲ್ಪಿಸಿವ ಕ್ರಮಕ್ಕೆ ಸೂಚಿಸಲಾಯಿತು. ಪರೀಕ್ಷೆಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಚ್ಚುಕಟ್ಟಾಗಿ ಯಾವುದೇ ರೀತಿ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸಲು ಅವರು ಹೇಳಿದರು.

ಈ ಸಂದರ್ಭದಲ್ಲಿ ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ಹಣಮಂತ ಕಾಲತಿಪ್ಪಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ ಹೊಸಮನಿ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಮಾರ್ಗಾಧಿಕಾರಿಗಳು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande