ಮಲಯಾಳಂ ಇಂಡಸ್ಟ್ರಿಗೆ ಗುರುದತ್ತ ಗಾಣಿಗ ಫಿಲ್ಮ್ಸ್ ಪ್ರವೇಶ
ಬೆಂಗಳೂರು, 28 ಫೆಬ್ರವರಿ (ಹಿ.ಸ.): ಆ್ಯಂಕರ್:ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಗುರುದತ್ತ ಗಾಣಿಗ ಫಿಲ್ಮ್ಸ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ವಿಷ್ಣು ಸತೀಸನ್ ನಿರ್ದೇಶನದ ಹೊಸ ಸಿನಿಮಾಗೆ ಗುರುದತ್ತ ಗಾಣಿಗ ಬಂಡವಾಳ ಹೂಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಚಿತ್ರದಲ್ಲಿ ದಕ್ಷಿ
Entry


ಬೆಂಗಳೂರು, 28 ಫೆಬ್ರವರಿ (ಹಿ.ಸ.):

ಆ್ಯಂಕರ್:ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಗುರುದತ್ತ ಗಾಣಿಗ ಫಿಲ್ಮ್ಸ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ವಿಷ್ಣು ಸತೀಸನ್ ನಿರ್ದೇಶನದ ಹೊಸ ಸಿನಿಮಾಗೆ ಗುರುದತ್ತ ಗಾಣಿಗ ಬಂಡವಾಳ ಹೂಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಚಿತ್ರದಲ್ಲಿ ದಕ್ಷಿಣ ಭಾರತದ ಹಿರಿಯ ನಟಿ ಊರ್ವಶಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಕಥಾ ಹಿನ್ನೆಲೆ ಹಾಗೂ ಇತರೆ ಕಲಾವಿದರ ವಿವರಗಳನ್ನು ಚಿತ್ರತಂಡ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆಯಿದೆ.

ಕನ್ನಡದಿಂದ ಮಲಯಾಳಂ ಇಂಡಸ್ಟ್ರಿಗೆ ನಿರ್ಮಾಣ ಸಂಸ್ಥೆಯ ಈ ಪ್ರವೇಶವು ಹೊಸ ಸಿನಿ ಸಹಕಾರಕ್ಕೆ ದಾರಿ ಮಾಡಿಕೊಡಲಿದೆ ಎಂದು ಚಿತ್ರರಂಗದ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande