
ಕಲಬುರಗಿ, 28 ಫೆಬ್ರವರಿ (ಹಿ.ಸ.):
ಆ್ಯಂಕರ್:ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ದಿಶಾ ಸಭೆಯಲ್ಲಿ ಸಚಿವ ಶರಣ ಪ್ರಕಾಶ ಪಾಟೀಲ ಭಾಗವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ, ಅನುದಾನ ಬಳಕೆ, ಕಾಮಗಾರಿಗಳ ಸ್ಥಿತಿ ಹಾಗೂ ಕೇಂದ್ರ–ರಾಜ್ಯ ಯೋಜನೆಗಳ ಪ್ರಗತಿ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು. ಇಲಾಖೆಗಳ ಮಧ್ಯೆ ಮಾಹಿತಿ ವಿನಿಮಯ ಹೆಚ್ಚಿಸಿ, ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಯಿತು.
ಸಭೆಯಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವರ್ಚ್ಯುಯಲ್ ಮೂಲಕ ಭಾಗವಹಿಸಿ ಸಲಹೆ–ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa