
ನವದೆಹಲಿ, 28 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಾಂಗ ಸಚಿವಾಲಯ ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳಿಗೆ ಅತ್ಯಂತ ಎಚ್ಚರಿಕೆಯಿಂದ ವರ್ತಿಸಿ, ಎಲ್ಲಾ ಸಮಯದಲ್ಲೂ ಜಾಗರೂಕರಾಗಿರಲು ಸೂಚಿಸಿದೆ.
ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಭಾರತೀಯರು ಇಸ್ರೇಲಿ ಅಧಿಕಾರಿಗಳು ಹಾಗೂ ಹೋಮ್ ಫ್ರಂಟ್ ಕಮಾಂಡ್ ನೀಡಿರುವ ಎಲ್ಲಾ ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನವೀಕರಿಸಿದ ಮಾಹಿತಿಗಾಗಿ oref.org.il/eng ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ತಿಳಿಸಲಾಗಿದೆ.
ಎಲ್ಲಾ ಭಾರತೀಯರು ತಮ್ಮ ವಾಸಸ್ಥಳ ಅಥವಾ ಕೆಲಸದ ಸ್ಥಳದ ಸಮೀಪದಲ್ಲಿರುವ ಗೊತ್ತುಪಡಿಸಿದ ಆಶ್ರಯಗಳ ಬಳಿ ಇರಬೇಕು ಹಾಗೂ ಹತ್ತಿರದ ಸಂರಕ್ಷಿತ ಸ್ಥಳಗಳ ಕುರಿತು ಪೂರ್ವಪರಿಚಯ ಹೊಂದಿರಬೇಕು ಎಂದು ಸಲಹೆ ನೀಡಲಾಗಿದೆ.
ಮುಂದಿನ ಸೂಚನೆ ಬರುವವರೆಗೂ ಇಸ್ರೇಲ್ನೊಳಗಿನ ಅನಗತ್ಯ ಪ್ರಯಾಣವನ್ನು ತಪ್ಪಿಸಲು ಸೂಚಿಸಲಾಗಿದೆ. ಸ್ಥಳೀಯ ಸುದ್ದಿಗಳು, ಅಧಿಕೃತ ಪ್ರಕಟಣೆಗಳು ಹಾಗೂ ತುರ್ತು ಎಚ್ಚರಿಕೆಗಳನ್ನು ನಿಯಮಿತವಾಗಿ ಗಮನಿಸುವಂತೆ ನಾಗರಿಕರಿಗೆ ಮನವಿ ಮಾಡಲಾಗಿದೆ.
ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ 24x7 ಸಹಾಯವಾಣಿಯನ್ನು ಸಂಪರ್ಕಿಸಬಹುದು.
ದೂರವಾಣಿ: +972-54-7520711
ಇಮೇಲ್: cons1.telaviv@mea.gov.in
ರಾಯಭಾರ ಕಚೇರಿ ಸಂಬಂಧಿತ ಇಸ್ರೇಲಿ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅಗತ್ಯವಿರುವಂತೆ ಮುಂದಿನ ನವೀಕರಣಗಳನ್ನು ನೀಡುವುದಾಗಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa