
ಬೆಂಗಳೂರು, 28 ಫೆಬ್ರವರಿ (ಹಿ.ಸ.):
ಆ್ಯಂಕರ್:
ರಾಷ್ಟ್ರೀಯ ವಿಜ್ಞಾನ ಕಾರ್ಯಕ್ರಮದಲ್ಲಿ ಸಚಿವ ಎಂ.ಸಿ.ಸುಧಾಕರ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕುತೂಹಲ, ವೈಜ್ಞಾನಿಕ ಚಿಂತನೆ ಹಾಗೂ ಹೊಸ ಆವಿಷ್ಕಾರಗಳ ಬಗ್ಗೆ ಅವರ ಉತ್ಸಾಹ ದೇಶದ ಭವಿಷ್ಯ ಭರವಸೆಯಾಗಿದೆ ಎಂಬ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರೆಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa