
ನವದೆಹಲಿ, 28 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ರಾಷ್ಟ್ರೀಯ ಅಭಿವೃದ್ಧಿ ಹಾಗೂ ಜಾಗತಿಕ ಕಲ್ಯಾಣ ಸಾಧಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.
ತಮ್ಮ ಎಕ್ಸ ಸಂದೇಶದಲ್ಲಿ ದೇಶವು ವಿಜ್ಞಾನ ಮತ್ತು ನಾವೀನ್ಯತೆಯ ಶಕ್ತಿಯಿಂದ ಸ್ವಾವಲಂಬಿ ಹಾಗೂ ಅಭಿವೃದ್ಧಿ ಹೊಂದಿದ ಭಾರತದ ಗುರಿಯತ್ತ ದಿಟ್ಟ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಿಜ್ಞಾನ ದಿನವು ಸಂಶೋಧನೆ, ನವೀನ ಆವಿಷ್ಕಾರ ಮತ್ತು ವೈಜ್ಞಾನಿಕ ಕುತೂಹಲದ ಮನೋಭಾವವನ್ನು ಆಚರಿಸುವ ದಿನವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ದಿನವು ಮಹಾನ್ ವಿಜ್ಞಾನಿ ಸಿ.ವಿ.ರಾಮನ್ ಅವರ ಐತಿಹಾಸಿಕ ‘'ರಾಮನ್ ಎಫೆಕ್ಟ್’ ಆವಿಷ್ಕಾರವನ್ನು ಸ್ಮರಿಸುವುದಾಗಿ ಪ್ರಧಾನಿ ಹೇಳಿದರು. ಈ ಆವಿಷ್ಕಾರವು ಭಾರತೀಯ ಸಂಶೋಧನೆಗೆ ಜಾಗತಿಕ ಮನ್ನಣೆ ತಂದುಕೊಟ್ಟು, ವಿಜ್ಞಾನ ಕ್ಷೇತ್ರದಲ್ಲಿ ದೇಶವನ್ನು ಹೊಸ ಎತ್ತರಗಳಿಗೆ ಕೊಂಡೊಯ್ದಿತು ಎಂದು ಅವರು ನೆನಪಿಸಿದರು.
ಯುವಜನರನ್ನು ಸಬಲೀಕರಣಗೊಳಿಸುವುದು, ಸಂಶೋಧನಾ ಪರಿಸರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಮತ್ತು ರಾಷ್ಟ್ರೀಯ ಅಭಿವೃದ್ಧಿ ಹಾಗೂ ಜಾಗತಿಕ ಹಿತಕ್ಕಾಗಿ ವಿಜ್ಞಾನ–ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ತಮ್ಮ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa