ವಿಜ್ಞಾನದ ಅನ್ವೇಷಣೆಯಲ್ಲಿ ಕರ್ನಾಟಕದ ಹೊಸ ಹೆಜ್ಜೆ: ಡಿ.ಕೆ. ಶಿವಕುಮಾರ್
ಬೆಂಗಳೂರು, 28 ಫೆಬ್ರವರಿ (ಹಿ.ಸ.): ಆ್ಯಂಕರ್:ಗ್ರಾಮೀಣ ಶಾಲಾ ಹಂತದಿಂದ ಹಿಡಿದು ಅತ್ಯಾಧುನಿಕ ಕ್ವಾಂಟಮ್ ತಂತ್ರಜ್ಞಾನದವರೆಗೆ ಕರ್ನಾಟಕವು ವಿಜ್ಞಾನದ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯ ಸರ್
Dks


ಬೆಂಗಳೂರು, 28 ಫೆಬ್ರವರಿ (ಹಿ.ಸ.):

ಆ್ಯಂಕರ್:ಗ್ರಾಮೀಣ ಶಾಲಾ ಹಂತದಿಂದ ಹಿಡಿದು ಅತ್ಯಾಧುನಿಕ ಕ್ವಾಂಟಮ್ ತಂತ್ರಜ್ಞಾನದವರೆಗೆ ಕರ್ನಾಟಕವು ವಿಜ್ಞಾನದ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳ ಕುರಿತು ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ವಿಜ್ಞಾನಾಸಕ್ತಿ ಬೆಳೆಸುವ ಉದ್ದೇಶದಿಂದ ಸಂಚಾರಿ ತಾರಾಲಯಗಳ ವ್ಯವಸ್ಥೆ, ಸುಸಜ್ಜಿತ ಪ್ರಯೋಗಾಲಯಗಳ ಸ್ಥಾಪನೆ ಹಾಗೂ ಉನ್ನತ ಸಂಶೋಧನಾ ವಿದ್ಯಾರ್ಥಿವೇತನಗಳಂತಹ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನವನ್ನು ಹತ್ತಿರಕ್ಕೆ ತರುವ ಪ್ರಯತ್ನವಾಗಿ, ಶಾಲಾ ಹಂತದಲ್ಲೇ ಪ್ರಾಯೋಗಿಕ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. “ಕೇವಲ ಪಾಠಪುಸ್ತಕ ಓದುವುದಷ್ಟೇ ಅಲ್ಲ, ವಿಜ್ಞಾನವನ್ನು ಕೈಯಲ್ಲಿ ಹಿಡಿದು ಅನುಭವಿಸುವ ಅವಕಾಶ ಕಲ್ಪಿಸುವುದು ನಮ್ಮ ಗುರಿ” ಎಂದು ಅವರು ಅಭಿಪ್ರಾಯಪಟ್ಟರು.

ಕ್ವಾಂಟಮ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಬಯೋಟೆಕ್‌ ಸೇರಿದಂತೆ ನವೀನ ಕ್ಷೇತ್ರಗಳಲ್ಲಿ ಸಂಶೋಧನೆಗೆ ಉತ್ತೇಜನ ನೀಡುವ ಮೂಲಕ ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ವಿಜ್ಞಾನ ಹಬ್‌ ಆಗಿ ರೂಪಿಸುವ ಸಂಕಲ್ಪವಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜ್ಯದ ಮುಂದಿನ ಪೀಳಿಗೆಯನ್ನು ವಿಜ್ಞಾನ, ಸಂಶೋಧನೆ ಮತ್ತು ಆವಿಷ್ಕಾರಗಳಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಸರ್ಕಾರದ ಪ್ರಯತ್ನಗಳು ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande