ರಾಯಚೂರು: ಭೀಕರ ಅಪಘಾತ ; ಮೂವರ ಸಾವು
ರಾಯಚೂರು, 28 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಯಚೂರಿನಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ. ನಗರದ ಬಸವೇಶ್ವರ ವೃತ್ತದ ಬಳಿ ಬೈಕ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹ್ಮದ್ ಅಲಿ ಪಾಷಾ(24
Accident


ರಾಯಚೂರು, 28 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಯಚೂರಿನಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ. ನಗರದ ಬಸವೇಶ್ವರ ವೃತ್ತದ ಬಳಿ ಬೈಕ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಹ್ಮದ್ ಅಲಿ ಪಾಷಾ(24), ನೂರ್ ಮಹ್ಮದ್(19), ಫಯಾಜ್(26) ಮೃತ ಬೈಕ್ ಸವಾರರು. ಮೃತರು ನಗರದ ಗಾಂಧಿ ಚೌಕಿನ ಸುಖಾಣಿ ನಿವಾಸಿಗಳೆಂದು ತಿಳಿದು ಬಂದಿದೆ.

ಅಪಘಾತದ ಸ್ಥಳಕ್ಕೆ ರಾಯಚೂರು ನಗರ ಸಂಚಾರ ಠಾಣೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande