ಸರ್ಕಾರಿ ಶಾಲೆಗಳ ಬಲವರ್ಧನೆಗೆ ಆದ್ಯತೆ: ಮಧು ಬಂಗಾರಪ್ಪ
ಬೆಂಗಳೂರು, 28 ಫೆಬ್ರವರಿ (ಹಿ.ಸ.): ಆ್ಯಂಕರ್: ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನದಲ್ಲಿ ಮಾತನಾಡಿದ ಅವರ
Madhu


ಬೆಂಗಳೂರು, 28 ಫೆಬ್ರವರಿ (ಹಿ.ಸ.):

ಆ್ಯಂಕರ್:

ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಅರಮನೆ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ 14,499 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉತ್ತರ ಕರ್ನಾಟಕ ಭಾಗದ ವರ್ಗಾವಣೆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದ 46,000 ಸರ್ಕಾರಿ ಶಾಲೆಗಳಲ್ಲಿ ಏಕಕಾಲಕ್ಕೆ ಪೋಷಕರ ಸಭೆ ನಡೆಸಿ, ಸಮುದಾಯದ ಸಹಭಾಗಿತ್ವ ಹೆಚ್ಚಿಸಲಾಗಿದೆ. ಈ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿಯನ್ನು 20 ಶೇಕಡಾ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande