ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ
ಬೆಂಗಳೂರು, 01 ಮಾರ್ಚ್ (ಹಿ.ಸ.): ಆ್ಯಂಕರ್: ಇಸ್ರೇಲ್ - ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಧಿಕಾರಿಗಳ ಜೊತೆ ಚರ
ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ


ಬೆಂಗಳೂರು, 01 ಮಾರ್ಚ್ (ಹಿ.ಸ.):

ಆ್ಯಂಕರ್:

ಇಸ್ರೇಲ್ - ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು,

ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande