ಸಿಎಂಆರ್ ಶ್ರೀನಾಥ್ ಅವರನ್ನು ಜೆಡಿಎಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಕಕ್ಕೆ ಒತ್ತಾಯ
ಸಿಎಂಆರ್ ಶ್ರೀನಾಥ್ ಅವರನ್ನು ಜೆಡಿಎಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಕಕ್ಕೆ ಒತ್ತಾಯ
ಯಲುವಗುಳಿ ನಾಗರಾಜ್


ಕೋಲಾರ, ೦೧ ಮಾರ್ಚ್ (ಹಿ.ಸ):

ಆಂಕರ್ : ಜಿಲ್ಲೆಯಾದ್ಯಂತ ಯುವಕರ ತಂಡದೊಂದಿಗೆ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ತೊಡಗಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪಕ್ಷದ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿರುವ ಅವರು ಸುಮಾರು ವರ್ಷಗಳಿಂದ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವುದರಲ್ಲಿ ಸಿಎಂಆರ್ ಶ್ರೀನಾಥ್ ಅವರು ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ ಯಾವುದೇ ಅಧಿಕಾರಕ್ಕೆ ಆಸೆ ಪಟ್ಟಿಲ್ಲ ಚುನಾವಣೆಯಲ್ಲಿ ಸೋತರು ಸಹ ಸಾಮಾನ್ಯ ಕಾರ್ಯಕರ್ತನಂತೆ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ ಮುಂಬರುವ ಜಿಪಂ, ತಾಪಂ, ಗ್ರಾಪಂ, ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ದೃಷ್ಟಿಯಿಂದ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗಾಗಿ ರಾಜ್ಯಾದ್ಯಂತ ಜೆಡಿಎಸ್ ಪಕ್ಷದ ಯುವ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಪಕ್ಷ ಅಂತಾ ಬಂದಾಗ ಯಾವುದೇ ಫಲಪೇಕ್ಷೇಗಳು ಇಲ್ಲದೇ ಇದ್ದರು ಪಕ್ಷಕ್ಕಾಗಿ ದುಡಿಯುವ ಯುವ ಪಡೆ ಇದ್ದು ಅಂತಹವರಿಗೆ ಅವಕಾಶ ಸಿಕ್ಕಾಗ ಮತ್ತಷ್ಟು ಕೆಲಸ ಮಾಡಲು ಸಾಧ್ಯವಾಗುತ್ತದೆ ಅ ನಿಟ್ಟಿನಲ್ಲಿ ವರಿಷ್ಠರು ಗಮನ ಹರಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಮುಳಬಾಗಿಲು ಮತ್ತು ಶ್ರೀನಿವಾಸಪುರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಶಾಸಕರು ಆಯ್ಕೆಯಾಗಿದ್ದಾರೆ ಜೊತೆಗೆ ಸಂಸದರು ಜೆಡಿಎಸ್ ಪಕ್ಷದವರು ಇದ್ದು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಜೆಡಿಎಸ್ ಗೆಲುವು ಮುಖ್ಯವಾಗಿದೆ ಎಲ್ಲಾ ಜಾತಿ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕರ್ತರ ಕುಂದು ಕೊರತೆಗಳಿಗೆ ಸ್ಪಂದಿಸುತ್ತಾ ಎಲ್ಲರ ವಿಶ್ವಾಸ ಗಳಿಸುವ ವ್ಯಕ್ತಿ ಸಿಎಂಆರ್ ಶ್ರೀನಾಥ್ ಮಾತ್ರ ಹೀಗಾಗಿ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande