ಕೊಪ್ಪಳ : ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಫಿಟ್ನೆಸ್ ಫಾರ್ ಆಲ್ ಮತ್ತು ಡ್ರಗ್ಸ್ ಫ್ರೀ ಕರ್ನಾಟಕ
ಕೊಪ್ಪಳ, 01 ಮಾರ್ಚ್ (ಹಿ.ಸ.) ಆ್ಯಂಕರ್ : ಕರ್ನಾಟಕ ರಾಜ್ಯ ಪೋಲಿಸ್ ಹಾಗೂ ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಕೊಪ್ಪಳದಲ್ಲಿ ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಫಿಟ್ನೆಸ್ ಫಾರ್ ಆಲ್ ಮತ್ತು ಡ್ರಗ್ಸ್ ಫ್ರೀ ಕರ್ನಾಟಕ ವಿಷಯಗಳ ಕುರಿತು ಐದು ಮತ್ತು ಆರು ಕಿಲೋಮೀಟರ್ ಮ್ಯಾರಥಾನ್ ಓಟ ಹಮ್ಮಿಕೊಳ
ಕೊಪ್ಪಳ : ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಫಿಟ್ನೆಸ್ ಫಾರ್ ಆಲ್ ಮತ್ತು ಡ್ರಗ್ಸ್ ಫ್ರೀ ಕರ್ನಾಟಕ


ಕೊಪ್ಪಳ, 01 ಮಾರ್ಚ್ (ಹಿ.ಸ.)

ಆ್ಯಂಕರ್ : ಕರ್ನಾಟಕ ರಾಜ್ಯ ಪೋಲಿಸ್ ಹಾಗೂ ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಕೊಪ್ಪಳದಲ್ಲಿ ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಫಿಟ್ನೆಸ್ ಫಾರ್ ಆಲ್ ಮತ್ತು ಡ್ರಗ್ಸ್ ಫ್ರೀ ಕರ್ನಾಟಕ ವಿಷಯಗಳ ಕುರಿತು ಐದು ಮತ್ತು ಆರು ಕಿಲೋಮೀಟರ್ ಮ್ಯಾರಥಾನ್ ಓಟ ಹಮ್ಮಿಕೊಳ್ಳುವ ಮೂಲಕ ವಿಶೇಷ ಜಾಗೃತಿ ಮೂಡಿಸಲಾಯಿತು.

ಕೊಪ್ಪಳ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಿಂದ ಏರ್ಪಡಿಸಲಾದ ಮ್ಯಾರಥಾನ್ ಓಟಕ್ಕೆ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ ಮತ್ತು ಕೊಪ್ಪಳ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾ ಮಹಾಂತೇಶ ಎಸ್. ದರಗದ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ಪೊಲೀಸ್ ಮತ್ತು ವಿವಿಧ ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande