ಕೊಪ್ಪಳ ಜಿಲ್ಲಾಡಳಿತ : 24×7 ಸಹಾಯವಾಣಿ
ಕೊಪ್ಪಳ, 01 ಮಾರ್ಚ್ (ಹಿ.ಸ.) ಆ್ಯಂಕರ್ : ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ 24×7
ಕೊಪ್ಪಳ ಜಿಲ್ಲಾಡಳಿತ : 24×7 ಸಹಾಯವಾಣಿ


ಕೊಪ್ಪಳ, 01 ಮಾರ್ಚ್ (ಹಿ.ಸ.)

ಆ್ಯಂಕರ್ : ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ 24×7 ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಯಾರಾದರೂ ಇರಾನ್, ಬಹರೈನ್, ಸೌದಿ ಮತ್ತು ಇತರೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಅಥವಾ ಸಂಕಷ್ಟದಲ್ಲಿದ್ದೆರೆ, ಕೂಡಲೇ 24×7 ಸಹಾಯವಾಣಿ ಸಂಖ್ಯೆ: 08539221077 ಗೆ ಸಂಪರ್ಕಿಸಬಹುದು.

ಇದಕ್ಕೆ ಕೊಪ್ಪಳ ಜಿಲ್ಲಾಡಳಿತವು ಸ್ಪಂದಿಸಿ ಸಂಕಷ್ಟದಲ್ಲಿ ಸಿಲುಕಿರುವ ಕೊಪ್ಪಳ ಜಿಲ್ಲೆಯ ಜನರನ್ನು ಸರ್ಕಾರದಿಂದ ರಕ್ಷಿಸಲು ಸಹಾಯ ಮಾಡಲಾಗುತ್ತದೆಂದು ಕೊಪ್ಪಳ ಜಿಲ್ಲಾಡಳಿತ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande