ಜಾರ್ಖಂಡ್ನಲ್ಲಿ ಐಇಡಿ ಸ್ಪೋಟ:ಸಹಾಯಕ ಕಮಾಂಡೆಂಟ್ ಗಂಭೀರ ಗಾಯ
ಪಶ್ಚಿಮ ಸಿಂಗ್‌ಭೂಮ್, 01 ಮಾರ್ಚ್ (ಹಿ.ಸ.): ಆ್ಯಂಕರ್: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆ ವ್ಯಾಪ್ತಿಯ ಸಾರಂಡಾ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಐಇಡಿ ಸ್ಫೋಟದಲ್ಲಿ 209ನೇ ಕೋಬ್ರಾ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ಅಜಯ್ ಮಲಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾವೋವಾದಿ ಚಟುವಟಿ
File


ಪಶ್ಚಿಮ ಸಿಂಗ್‌ಭೂಮ್, 01 ಮಾರ್ಚ್ (ಹಿ.ಸ.):

ಆ್ಯಂಕರ್:

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆ ವ್ಯಾಪ್ತಿಯ ಸಾರಂಡಾ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಐಇಡಿ ಸ್ಫೋಟದಲ್ಲಿ 209ನೇ ಕೋಬ್ರಾ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ಅಜಯ್ ಮಲಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾವೋವಾದಿ ಚಟುವಟಿಕೆಗಳ ಬಗ್ಗೆ ಬಂದ ಗುಪ್ತಚರ ಮಾಹಿತಿಯ ಆಧಾರದ ಮೇಲೆ 209ನೇ ಕೋಬ್ರಾ ಪಡೆ ಹಾಗೂ ಜಿಲ್ಲಾ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ದಟ್ಟ ಕಾಡು ಪ್ರದೇಶದಲ್ಲಿ ಸಾಗುತ್ತಿದ್ದ ವೇಳೆ ನೆಲದಡಿಯಲ್ಲಿ ಅಡಗಿಸಲಾಗಿದ್ದ ಒತ್ತಡ ಆಧಾರಿತ ಐಇಡಿ ಸ್ಫೋಟಗೊಂಡಿತು. ಸ್ಫೋಟದ ತೀವ್ರತೆ ಬಹಳ ಪ್ರಬಲವಾಗಿದ್ದು, ಅದರ ಶಬ್ದವು ದೂರದವರೆಗೂ ಕೇಳಿಸಿತ್ತೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಸಹಾಯಕ ಕಮಾಂಡೆಂಟ್ ಅಜಯ್ ಮಲಿಕ್ ಗಂಭೀರವಾಗಿ ಗಾಯಗೊಂಡಿದ್ದು, ಸಹೋದ್ಯೋಗಿಗಳು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಂಡು, ಅವರನ್ನು ಸ್ಥಳದಿಂದ ಸ್ಥಳಾಂತರಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ರಾಂಚಿಗೆ ವಿಮಾನದ ಮೂಲಕ ಕಳುಹಿಸಲಾಗಿದೆ.

ಪಶ್ಚಿಮ ಸಿಂಗ್‌ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ರೇಣು, ಘಟನೆಯನ್ನು ದೃಢಪಡಿಸಿದ್ದು, ಸ್ಫೋಟದ ಬಳಿಕ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ತೀವ್ರ ಶೋಧ ಕಾರ್ಯಾಚರಣೆ ಮುಂದುವರೆಸಿವೆ ಎಂದು ತಿಳಿಸಿದ್ದಾರೆ. ಹೆಚ್ಚುವರಿ ಪಡೆಗಳನ್ನು ಕೂಡ ನಿಯೋಜಿಸಲಾಗಿದ್ದು, ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande