ಚಾಮರಾಜನಗರದಲ್ಲಿ ಕರ್ನಾಟಕ ಪೊಲೀಸ್ ರನ್
ಚಾಮರಾಜನಗರ, 01 ಮಾರ್ಚ್ (ಹಿ.ಸ.): ಆ್ಯಂಕರ್: ನಮ್ಮ ಪೊಲೀಸ್, ನಮ್ಮ ಹೆಮ್ಮೆ – ಫಿಟ್ನೆಸ್ ಫಾರ್ ಆಲ್ – ಡ್ರಗ್ಸ್ ಫ್ರೀ ಕರ್ನಾಟಕ” ಧ್ಯೇಯ ವಾಕ್ಯದಡಿ ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ “ಕರ್ನಾಟಕ ಪೊಲೀಸ್ ರನ್–2026” ಅಂಗವಾಗಿ 5 ಕಿಮೀ ಮ್ಯಾರಥಾನ್ ಓಟವನ್ನು ಆಯೋಜಿಸಿ ಭಾನುವಾರ ಚಾಲನೆ ನೀಡಲಾಯಿತು.
Run


ಚಾಮರಾಜನಗರ, 01 ಮಾರ್ಚ್ (ಹಿ.ಸ.):

ಆ್ಯಂಕರ್:

ನಮ್ಮ ಪೊಲೀಸ್, ನಮ್ಮ ಹೆಮ್ಮೆ – ಫಿಟ್ನೆಸ್ ಫಾರ್ ಆಲ್ – ಡ್ರಗ್ಸ್ ಫ್ರೀ ಕರ್ನಾಟಕ” ಧ್ಯೇಯ ವಾಕ್ಯದಡಿ ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ “ಕರ್ನಾಟಕ ಪೊಲೀಸ್ ರನ್–2026” ಅಂಗವಾಗಿ 5 ಕಿಮೀ ಮ್ಯಾರಥಾನ್ ಓಟವನ್ನು ಆಯೋಜಿಸಿ ಭಾನುವಾರ ಚಾಲನೆ ನೀಡಲಾಯಿತು. ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮ್ಯಾರಥಾನ್ಗೆ ಪ್ರಾಯೋಜಕರಾಗಿ ಬ್ಯಾಂಕ್ ಆಫ್ ಬರೋಡ ಹಾಗೂ ಚಾಮುಲ್ ಸಹಕರಿಸಿದರು. ಸ್ಪರ್ಧೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.

ಸ್ಪರ್ಧೆಯಲ್ಲಿ ವಿಜೇತರಾದ ಪುರುಷ ಮತ್ತು ಮಹಿಳಾ ಸ್ಪರ್ಧಿಗಳಿಗೆ ಪ್ರತ್ಯೇಕವಾಗಿ ಬಹುಮಾನ, ಪದಕ ಹಾಗೂ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಪ್ರಾಯೋಜಕ ಸಂಸ್ಥೆಗಳ ವ್ಯವಸ್ಥಾಪಕರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande