
ಶಿರಸಿ, 01 ಮಾರ್ಚ್ (ಹಿ.ಸ.):
ಆ್ಯಂಕರ್:
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆಯುತ್ತಿರುವ ಶ್ರೀ ಮಾರಿಕಾಂಬಾ ದೇವಸ್ಥಾನ ಜಾತ್ರೆಯ ಸಂಭ್ರಮ ಮೆರೆಯುತ್ತಿದೆ. ಸಾವಿರಾರು ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸುತ್ತಿದ್ದು, ನಗರವು ಭಕ್ತಿಭಾವದ ವಾತಾವರಣದಲ್ಲಿ ತೇಲುತ್ತಿದೆ.
ಇಂದು ಶಿರಸಿಯ ಶಿವಾಜಿ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಮಜ್ಜಿಗೆ ಹಾಗೂ ಸಿಹಿ ವಿತರಣಾ ಸೇವೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿದರು.
ಬಿಸಿಲಿನ ತಾಪದಲ್ಲಿ ದಣಿದು ಬರುವ ಭಕ್ತಾದಿಗಳ ದಾಹ ನೀಗಿಸಲು ‘ಅರವಟ್ಟಿಗೆ’ ಸೇವೆಯನ್ನು ನಿರಂತರವಾಗಿ ನಡೆಸುತ್ತಿರುವ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಸೇವಾ ಮನೋಭಾವ ನಮ್ಮ ಸಂಸ್ಕೃತಿ, ಸಹಾನುಭೂತಿ ಹಾಗೂ ಪರೋಪಕಾರದ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಸಂಸದರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿಪೂರ್ವಕವಾಗಿ ನಡೆಯುತ್ತಿದ್ದು, ಭಕ್ತರು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa