
ನವದೆಹಲಿ, 01 ಮಾರ್ಚ್ (ಹಿ.ಸ.):
ಆ್ಯಂಕರ್:
ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ದುರಂತ ತೀವ್ರ ದುಃಖವನ್ನುಂಟುಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಅಗತ್ಯ ಸಹಾಯ ಒದಗಿಸುತ್ತಿದೆ ಎಂದು ಹೇಳಿದ್ದಾರೆ.
ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ₹50,000 ನೆರವು ನೀಡಲಾಗುವುದು ಎಂದು ಪ್ರಧಾನಿ ಘೋಷಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa