
ಅಮೀನಗಡ, 01 ಮಾರ್ಚ್ (ಹಿ.ಸ.):
ಆ್ಯಂಕರ್:ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಅಮೀನಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಸಮುದಾಯಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಗೌರವದಿಂದ ಆಚರಿಸುವ ಬಗ್ಗೆ ಚರ್ಚಿಸಿದರು.
ಪೊಲೀಸ್ ಅಧಿಕಾರಿಗಳು ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಹಕಾರ ನೀಡುವಂತೆ ಮನವಿ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಲಾಯಿತು.
ಸಭೆಯಲ್ಲಿ ಸಾರ್ವಜನಿಕರು ಸಹ ಪೊಲೀಸ್ ಇಲಾಖೆಗೆ ಸಹಕರಿಸುವುದಾಗಿ ಭರವಸೆ ನೀಡಿದರು. ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa