
ಬೆಂಗಳೂರು, 01 ಮಾರ್ಚ್ (ಹಿ.ಸ.):
ಆ್ಯಂಕರ್:
ಮಾನವನಲ್ಲಿನ ದಾನವ ಗುಣಗಳನ್ನು ದಹಿಸಿ ಮಹದೇವನನ್ನಾಗಿಸುವ ಅಪೂರ್ವ ತತ್ವ ಸಿದ್ಧಾಂತಗಳನ್ನು ಪ್ರತಿಪಾದಿಸಿದ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿಯಂದು ಭಕ್ತಿಪೂರ್ವಕ ನಮನಗಳನ್ನು ಅರ್ಪಿಸುತ್ತೇನೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಸಾಮರಸ್ಯ, ಸಹಬಾಳ್ವೆ ಮತ್ತು ಸೌಹಾರ್ದತೆಯ ಜೀವನ ಮೌಲ್ಯಗಳನ್ನು ಬೋಧಿಸಿದ ಅವರ ಚಿಂತನೆಗಳು ಸಮಾಜ ಸುಧಾರಣೆಗೆ ದಾರಿದೀಪವಾಗಿವೆ ಎಂದು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa