ರೇಣುಕಾಚಾರ್ಯರ ಬೋಧನೆಗಳು ನಮಗೆ ದಾರಿದೀಪ: ಡಿ.ಕೆ.ಶಿವಕುಮಾರ್
ಚಿಕ್ಕಮಗಳೂರು, 01 ಮಾರ್ಚ್ (ಹಿ.ಸ.): ಆ್ಯಂಕರ್: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಮಹಾರಥೋತ್ಸವದ ಅಂಗವಾಗಿ ನಡೆದ ಕಾರ್
Dks


ಚಿಕ್ಕಮಗಳೂರು, 01 ಮಾರ್ಚ್ (ಹಿ.ಸ.):

ಆ್ಯಂಕರ್:

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಮಹಾರಥೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದರು.

ಪೀಠಕ್ಕೆ ಭೇಟಿ ನೀಡಿದ ಅವರು ವೀರಭದ್ರ ಸ್ವಾಮಿ ದೇವರ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಇದೇ ವೇಳೆ ಪೀಠದ ಆವರಣದಲ್ಲಿ ನಿರ್ಮಿಸಲಾಗುತ್ತಿರುವ 51 ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಮಂಗಲ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ ನೆರವೇರಿಸಲಾಯಿತು. ಪೀಠ ನಿರ್ಮಿಸಿರುವ ಮೇಲ್ಪಾರ್ ರಸ್ತೆಯ ಉದ್ಘಾಟನೆ ಸಹ ನೆರವೇರಿತು.

ಕಾರ್ಯಕ್ರಮದಲ್ಲಿ ಜಗದ್ಗುರು ಪ್ರಸನ್ನರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ಇಂತಹ ಪುಣ್ಯಭೂಮಿಯಲ್ಲಿ ನಿಂತುಕೊಂಡು ರೇಣುಕಾಚಾರ್ಯರ ಮಂಗಲಮೂರ್ತಿ ಶಿಲಾನ್ಯಾಸ ಭೂಮಿ ಪೂಜೆಯಲ್ಲಿ ಭಾಗವಹಿಸುವ ಅವಕಾಶ ನನಗೆ ಸಿಕ್ಕಿರುವುದು ನನ್ನ ಭಾಗ್ಯ. ಮಹಾಸ್ವಾಮಿಗಳಿಗೂ ಹಾಗೂ ನನ್ನ ಗುರುಗಳಾದ ವೀರ ಗಂಗಾಧರ ಅಜ್ಜಯ್ಯನ ಪಾದಗಳಿಗೂ ನನ್ನ ಕೋಟಿ ಪ್ರಣಾಮಗಳು,” ಎಂದು ಹೇಳಿದರು.

ವೀರ ಗಂಗಾಧರ ಅಜ್ಜಯ್ಯನವರು ಈ ಪೀಠದ ಅಧ್ಯಕ್ಷರಾಗಿದ್ದು, “ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ” ಎಂಬ ಸಂದೇಶ ನೀಡಿದ್ದರು ಎಂದು ಸ್ಮರಿಸಿದ ಅವರು, “ನಮ್ಮ ಮನೆಗಳನ್ನು ಯಾವ ರೀತಿ ಕಾಪಾಡುತ್ತೇವೆಯೋ ಹಾಗೆಯೇ ನಮ್ಮ ಮಠಗಳನ್ನು ನಾವು ಕಾಪಾಡಬೇಕು. ಶ್ರೀ ಜಗದ್ಗುರು ರೇಣುಕಾಚಾರ್ಯರ ಬೋಧನೆಗಳೇ ನಮಗೆ ದಾರಿದೀಪ,” ಎಂದು ಅಭಿಪ್ರಾಯಪಟ್ಟರು.

ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಪೀಠಗಳ ಪಾತ್ರ ಮಹತ್ತರವಾಗಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಭಕ್ತರು, ಗಣ್ಯರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande