ಆಲಮಟ್ಟಿಯಲ್ಲಿ ಜಲ ವಿನೋದ ಉದ್ಯಾನ ಲೋಕಾರ್ಪಣೆ
ಬಾಗಲಕೋಟೆ, 01 ಮಾರ್ಚ್ (ಹಿ.ಸ.): ಆ್ಯಂಕರ್: ಬಸನಾಡಿನ ಹೆಮ್ಮೆಯ ತಾಣವಾದ ಬಾಗಲಕೋಟೆ ಜಿಲ್ಲೆಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಸಮೀಪ ಅಂದಾಜು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ‘ವಾಟರ್ ಅಮ್ಯೂಸ್ಮೆಂಟ್ ಪಾರ್ಕ್’ ಅನ್ನು ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು. ಆಧುನಿಕ ತಂತ್ರಜ್ಞಾನದಿಂದ ರೂ
Inauguration


ಬಾಗಲಕೋಟೆ, 01 ಮಾರ್ಚ್ (ಹಿ.ಸ.):

ಆ್ಯಂಕರ್:

ಬಸನಾಡಿನ ಹೆಮ್ಮೆಯ ತಾಣವಾದ ಬಾಗಲಕೋಟೆ ಜಿಲ್ಲೆಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಸಮೀಪ ಅಂದಾಜು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ‘ವಾಟರ್ ಅಮ್ಯೂಸ್ಮೆಂಟ್ ಪಾರ್ಕ್’ ಅನ್ನು ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು.

ಆಧುನಿಕ ತಂತ್ರಜ್ಞಾನದಿಂದ ರೂಪುಗೊಂಡಿರುವ ಈ ಜಲ ವಿನೋದ ಉದ್ಯಾನದಲ್ಲಿ ವಿವಿಧ ಜಲಕ್ರೀಡೆಗಳು, ಮಕ್ಕಳಿಗಾಗಿ ವಿಶೇಷ ಆಟೋಪಕರಣಗಳು ಹಾಗೂ ಕುಟುಂಬ ಸಮೇತ ವಿಶ್ರಾಂತಿಗೆ ಅನುಕೂಲವಾದ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದು ಕೇವಲ ಮನರಂಜನಾ ಕೇಂದ್ರವಷ್ಟೇ ಅಲ್ಲದೆ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಜಿಲ್ಲೆಯ ಆರ್ಥಿಕತೆಗೆ ಉತ್ತೇಜನ ನೀಡುವ ಯೋಜನೆಯಾಗಿದೆ ಎಂದು ಸಚಿವರು ಹೇಳಿದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಆಕರ್ಷಕ ಸೌಲಭ್ಯಗಳನ್ನು ಸೇರಿಸಿ, ಈ ತಾಣವನ್ನು ರಾಜ್ಯ ಮಟ್ಟದ ಅಮ್ಯೂಸ್ಮೆಂಟ್ ಪಾರ್ಕ್ ಆಗಿ ಅಭಿವೃದ್ಧಿಪಡಿಸುವ ಸಂಕಲ್ಪವಿದೆ. ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಗಳಷ್ಟೇ ಅಲ್ಲದೆ, ಸಂಪೂರ್ಣ ಉತ್ತರ ಕರ್ನಾಟಕವನ್ನು ಪ್ರವಾಸೋದ್ಯಮ ನಕ್ಷೆಯಲ್ಲಿ ಪ್ರಭಾವಿಯಾಗಿ ಗುರುತಿಸುವ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಕ್ರಮದಿಂದ ಸುಮಾರು 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆತು, ರೈತರ ಬದುಕಿನಲ್ಲಿ ಸಮೃದ್ಧಿಯ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande