ಲಾರಿಗೆ ಕಾರು ಡಿಕ್ಕಿ:ನವದಂಪತಿ ಸ್ಥಳದಲ್ಲಿ ಸಾವು
ಹಾವೇರಿ, 01 ಮಾರ್ಚ್ (ಹಿ.ಸ.): ಆ್ಯಂಕರ್: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಪತಿ ಕಾರ್ತಿಕ್ ಹ
Accident


ಹಾವೇರಿ, 01 ಮಾರ್ಚ್ (ಹಿ.ಸ.):

ಆ್ಯಂಕರ್:

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಪತಿ ಕಾರ್ತಿಕ್ ಹೂಗಾರ (34) ಮತ್ತು ಪತ್ನಿ ಐಶ್ವರ್ಯ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆಯಾಗಿ ಕೇವಲ 15 ದಿನಗಳಷ್ಟೇ ಆಗಿದ್ದ ದಂಪತಿ ದೇವರ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತರು ಹಾವೇರಿ ನಗರದ ನಿವಾಸಿಗಳಾಗಿದ್ದರು.

ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸ್ಥಳಕ್ಕೆ ತಡಸ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande