
ಹುಬ್ಬಳ್ಳಿ, 01 ಮಾರ್ಚ್ (ಹಿ.ಸ.):
ಆ್ಯಂಕರ್:ಸ್ವಚ್ಚತಾ ಆಂದೋಲನ ಪರಿವಾರ ವತಿಯಿಂದ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 44ರ ಮಧುರಾ ಕಾಲನಿ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಚ್ಛತೆ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ತಿಳಿಸಿ, ಜನರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುದ್ಧವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಶ್ರೀಮತಿ ಉಮಾ ಮುಕುಂದ, ಸ್ವಚ್ಚತಾ ಆಂದೋಲನ ಪರಿವಾರದ ಸದಸ್ಯರು ಹಾಗೂ ಪ್ರಮುಖರಾದ ವಿನೋದ ರೇವಣಕರ, ವೈ.ಬಿ. ಪಾಟೀಲ, ವಿನೋದ ಪಟವಾ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa