ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ನಾಸಿರ್ ಹುಸೇನ್ ಸಾವು
ಉಡುಪಿ, 01 ಮಾರ್ಚ್ (ಹಿ.ಸ.): ಆ್ಯಂಕರ್: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್ ವೇಳೆ ಕುಸಿದು ಬಿದ್ದ ಉಪನಿರೀಕ್ಷಕ (ಎಸ್‌ಐ) ನಾಸಿರ್ ಹುಸೇನ್ (58) ಅವರು ಮೃತಪಟ್ಟ ದುರ್ಘಟನೆ ಉಡುಪಿಯಲ್ಲಿ ನಡೆದಿದೆ. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷವಾಕ್ಯದೊಂದಿಗೆ ಹಾಗೂ ಡ್ರಗ
Death


ಉಡುಪಿ, 01 ಮಾರ್ಚ್ (ಹಿ.ಸ.):

ಆ್ಯಂಕರ್:

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್ ವೇಳೆ ಕುಸಿದು ಬಿದ್ದ ಉಪನಿರೀಕ್ಷಕ (ಎಸ್‌ಐ) ನಾಸಿರ್ ಹುಸೇನ್ (58) ಅವರು ಮೃತಪಟ್ಟ ದುರ್ಘಟನೆ ಉಡುಪಿಯಲ್ಲಿ ನಡೆದಿದೆ.

‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷವಾಕ್ಯದೊಂದಿಗೆ ಹಾಗೂ ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದಡಿ ಮ್ಯಾರಥಾನ್ ಆಯೋಜಿಸಲಾಗಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಓಟದಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದರು. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ ನಾಸಿರ್ ಹುಸೇನ್ 2010 ಬ್ಯಾಚ್‌ನ ಪೊಲೀಸ್ ಅಧಿಕಾರಿ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande