ಗ್ರಾಮೀಣ ಶಿಕ್ಷಣದ ಬೆಳವಣಿಗೆ ದೇಶದ ಅಭಿವೃದ್ಧಿಗೆ ದಾರಿ:ಸಚಿವ ಜಾರಕಿಹೊಳಿ
ಹಾವೇರಿ, 01 ಮಾರ್ಚ್ (ಹಿ.ಸ.): ಆ್ಯಂಕರ್: ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಹೊಸ ನೀರಲಗಿ ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿ ಶಾಲೆಯ
Jarkiholi


ಹಾವೇರಿ, 01 ಮಾರ್ಚ್ (ಹಿ.ಸ.):

ಆ್ಯಂಕರ್:

ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಹೊಸ ನೀರಲಗಿ ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿ ಶಾಲೆಯ 75 ವರ್ಷಗಳ ಶೈಕ್ಷಣಿಕ ಸಾಧನೆಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಶಾಲೆಯ 75 ವರ್ಷಗಳ ಪಯಣವು ಕೇವಲ ಇತಿಹಾಸವಲ್ಲ ಅದು ಗ್ರಾಮೀಣ ಶಿಕ್ಷಣದ ಬೆಳವಣಿಗೆಯ ಪ್ರತೀಕವಾಗಿದೆ. ಈ ಅವಧಿಯಲ್ಲಿ ಅನೇಕ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿರುವುದು ಶಾಲೆಯ ಗೌರವವನ್ನು ಹೆಚ್ಚಿಸಿದೆ,” ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಅವರು, ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ಶಿಕ್ಷಕರ ಪರಿಶ್ರಮ ಮತ್ತು ಗ್ರಾಮಸ್ಥರ ಸಹಕಾರದಿಂದಲೇ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಸಾಧ್ಯವೆಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದು, ಶಾಲೆಯ ಸಾಧನೆಗಳನ್ನು ಸ್ಮರಿಸಿ ಅಭಿನಂದಿಸಿದರು. ಅಮೃತ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸನ್ಮಾನ ಸಮಾರಂಭ ಹಾಗೂ ಸ್ಮರಣಿಕೆ ಬಿಡುಗಡೆ ಕಾರ್ಯಕ್ರಮಗಳು ಜರುಗಿದವು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande