
ಹಾವೇರಿ, 01 ಮಾರ್ಚ್ (ಹಿ.ಸ.):
ಆ್ಯಂಕರ್:
ಅಮೃತ ಮಹೊತ್ಸವ ಆಚರಿಸಿಕೊಳ್ಳುತ್ತಿರುವ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹೊಸ ನೀರಲಗಿ ಶಾಲೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ನಾಯಿ ಆಗ್ರಹಿಸಿದರು.
ಹೊಸನೀರಲಗಿ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಹೊಸ ನೀರಲಗಿ ಗ್ರಾಮ ಬಹಳ ಅಂದ ಚಂದ ಇರುವ ಎಲ್ಲ ಸಮಾಜದವರು ಸಾಮರಸ್ಯದಿಂದ ಇರುವ ಗ್ರಾಮ. ಎಲ್ಲರೂ ಒಕ್ಕಟ್ಟಿನಿಂದ ಕಾರ್ಯಕ್ರಮವನ್ನು ಮಾಡಿದ್ದೀರಿ, ಈ ಗ್ರಾಮದ ನೂರಾರು ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿದ್ದೇನೆ. ದೇವಸ್ಥಾನ, ಶಾಲೆ, ರಸ್ತೆ ನಿರ್ಮಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಂಡಿದ್ದೇನೆ. ಬಹಳಷ್ಟು ಪ್ರೀತಿ ವಿಶ್ವಾಸ ಕೊಟ್ಟಿರುವ ಗ್ರಾಮ ಎಂದು ಹೇಳಿದರು.
ಈ ಗ್ರಾಮದಲ್ಲಿ ಶಾಲೆಯ ಅಮೃತ ಮಹೋತ್ಸವ ಆಗುತ್ತಿರುವುದು ಸಂತಸದ ವಿಷಯ. ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಈ ಶಾಲೆಗೆ ವಿಶೇಷ ಅನುದಾನ ನೀಡಬೇಕು. 75 ವರ್ಷ ತುಂಬಿರುವ ಈ ಸಂದರ್ಭದಲ್ಲಿ ಈ ಭಾಗದ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಸಂಸದರ ನಿಧಿಯಿಂದ 10 ಲಕ್ಷ ರೂ. ಅನುದಾನ ಕೊಡಿಸುವ ಭರವಸೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa