ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳ ಹಾರಾಟ ರದ್ದು
ಬೆಂಗಳೂರು, 10 ಮಾರ್ಚ್ (ಹಿ.ಸ.): ಆ್ಯಂಕರ್: ಇರಾನ್–ಇಸ್ರೇಲ್ ನಡುವಿನ ಯುದ್ಧ ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 17 ವಿಮಾನಗಳ ಹಾರಾಟವನ್ನು ರದ್ದುಗೊ
KIA


ಬೆಂಗಳೂರು, 10 ಮಾರ್ಚ್ (ಹಿ.ಸ.):

ಆ್ಯಂಕರ್:

ಇರಾನ್–ಇಸ್ರೇಲ್ ನಡುವಿನ ಯುದ್ಧ ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 17 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಮಧ್ಯಪ್ರಾಚ್ಯದ ಹಲವು ದೇಶಗಳ ಮಾರ್ಗಗಳಲ್ಲಿ ಭದ್ರತಾ ಕಾರಣಗಳು ಹಾಗೂ ವಾಯು ಪ್ರದೇಶ ನಿರ್ಬಂಧದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿಗೆ ಆಗಮಿಸಬೇಕಿದ್ದ 8 ವಿಮಾನಗಳು ಹಾಗೂ ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.

ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ ಮತ್ತು ದೋಹಾ ಮಾರ್ಗಗಳಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ರದ್ದಾಗಿವೆ. ಅದೇ ರೀತಿ ಬೆಂಗಳೂರಿನಿಂದ ಈ ನಗರಗಳಿಗೆ ತೆರಳಬೇಕಿದ್ದ ಕೆಲವು ವಿಮಾನಗಳೂ ಹಾರಾಟ ಸ್ಥಗಿತಗೊಂಡಿವೆ.

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಭದ್ರತಾ ಅಪಾಯದ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ತಾತ್ಕಾಲಿಕವಾಗಿ ಹಾರಾಟಗಳನ್ನು ಸ್ಥಗಿತಗೊಳಿಸಿರುವುದಾಗಿ ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರು ತಮ್ಮ ವಿಮಾನಗಳ ನವೀಕರಿಸಿದ ವೇಳಾಪಟ್ಟಿಯನ್ನು ಪರಿಶೀಲಿಸಿ ಬಳಿಕವೇ ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande