ಯಲಬುರ್ಗಾ: ನಾಳೆ ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಾಗಾರ
ಯಲಬುರ್ಗಾ, 10 ಮಾರ್ಚ್ (ಹಿ.ಸ.) ಆ್ಯಂಕರ್: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಪಟ
ಯಲಬುರ್ಗಾ: ನಾಳೆ ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಾಗಾರ


ಯಲಬುರ್ಗಾ, 10 ಮಾರ್ಚ್ (ಹಿ.ಸ.)

ಆ್ಯಂಕರ್: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ಯಲಬುರ್ಗಾ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಸದಸ್ಯರುಗಳಾದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಕ್ಕಳ ಹಕ್ಕುಗಳು, ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು ತರಬೇತಿ ಕಾರ್ಯಕ್ರಮವನ್ನು ಮಾರ್ಚ್ 11 ರ ಬೆಳಿಗ್ಗೆ 10 ಗಂಟೆಗೆ ಯಲಬುರ್ಗಾ ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡುವರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಹೇಮಂತಕುಮಾರ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪರಶುರಾಮ ವ್ಹಾಯ್ ಶೆಟ್ಟೆಪ್ಪನವರ್, ಯಲಬುರ್ಗಾ ತಹಶೀಲ್ದಾರರು ಪ್ರಕಾಶ ನಾಶಿ, ಯಲಬುರ್ಗಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ ಅವರು ಭಾಗವಹಿಸುವರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.

ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದೇಶ ಮಾಳೇಕೊಪ್ಪ, ಆರಕ್ಷಕ ವೃತ್ತ ನೀರಿಕ್ಷಕ ಮೌನೇಶ್ವರ ಪಾಟೀಲ್, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಅಶೋಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿ ಡಾ. ನೇತ್ರಾವತಿ ಹಿರೇಮಠ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗೇಶ, ಕಾರ್ಮಿಕ ಇಲಾಖೆಯ ನಿರೀಕ್ಷಕಿ ನಿವೇದಿತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಶಿವಶಂಕರ ಸೇರಿದಂತೆ ಇನ್ನಿತರರು ಅತಿಥಿಗಳಾಗಿ ಭಾಗವಹಿಸುವರು ಎಂದು‌ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande