ಜನಗಣತಿ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ಕೊಪ್ಪಳ, 10 ಮಾರ್ಚ್ (ಹಿ.ಸ.) ಆ್ಯಂಕರ್: ಭಾರತ ಜನಗಣತಿ 2027ರ ಕಾರ್ಯಕ್ಕೆ ನೇಮಿಸಲ್ಪಡುವ ಅಧಿಕಾರಿಗಳು ಮತ್ತು ಸಹಾಯಕ ಅಧಿಕಾರಿಗಳು ಜನಗಣತಿ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲ
ಜನಗಣತಿ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಜನಗಣತಿ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಜನಗಣತಿ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಜನಗಣತಿ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಜನಗಣತಿ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕೊಪ್ಪಳ, 10 ಮಾರ್ಚ್ (ಹಿ.ಸ.)

ಆ್ಯಂಕರ್: ಭಾರತ ಜನಗಣತಿ 2027ರ ಕಾರ್ಯಕ್ಕೆ ನೇಮಿಸಲ್ಪಡುವ ಅಧಿಕಾರಿಗಳು ಮತ್ತು ಸಹಾಯಕ ಅಧಿಕಾರಿಗಳು ಜನಗಣತಿ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾರತ ಜನಗಣತಿ 2027ರ ಸಂಬಂಧ ಜಿಲ್ಲಾ ಹಂತದ ಅಧಿಕಾರಿಗಳು, ನಗರ, ಸ್ಥಳೀಯ ಸಂಸ್ಥೆ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಮೂರು ದಿನಗಳ ತರಬೇತಿ ಕಾರ್ಯಾಗಾರದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಜನಗಣತಿ-2027 ಪ್ರಕ್ರಿಯೆಯ ಪೂರ್ವ ಸಿದ್ಧತೆಗಳು ಆರಂಭಗೊಳ್ಳುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಈ ಜನಗಣತಿ ಪ್ರಕ್ರಿಯೆಗೆ ಅವಶ್ಯವಿರುವ ಅಗತ್ಯ ನಕ್ಷೆಗಳು, ನಮೂನೆಗಳನ್ನು ತಯಾರು ಮಾಡುವುದು ಸೇರಿದಂತೆ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಜನಗಣತಿ ಕರ್ತವ್ಯವನ್ನು ನಿರ್ವಹಿಸಬೇಕು. ಈ ಕಾರ್ಯದ ಮೇಲ್ವಿಚಾರಣೆಗಾಗಿ ನೇಮಕ ಮಾಡಲಾದ ತಾಲ್ಲೂಕು ನೋಡಲ್ ಅಧಿಕಾರಿಗಳು, ತಮಗೆ ಹಂಚಿಕೆ ಮಾಡಲಾದ ತಾಲ್ಲೂಕಿನ ಶಹರ ಮತ್ತು ಗ್ರಾಾಮೀಣ ಪ್ರದೇಶಗಳಲ್ಲಿ ಜನಗಣತಿ ಕಾರ್ಯ 2027ರ ಸಂಬಂಧಿಸಿದ ಕಾರ್ಯಗಳನ್ನು ಸಂಬಂಧಪಟ್ಟ ತಹಶೀಲ್ದಾರರು, ಪೌರಾಯುಕ್ತರು ಅಥವಾ ಮುಖ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಸೂಕ್ತ ಮೇಲ್ವಿಚಾರಣೆ ಮಾಡಬೇಕು ಎಂದು ಸೂಚನೆ ನೀಡಿದರು.

ನಿಖರ ಜನಗಣತಿಯಿಂದ ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಜನಸಾಮಾನ್ಯರಿಗೆ ತಲುಪಿಸಲು ಅನುಕೂಲವಾಗಲಿದೆ. ಕಳೆದ ಬಾರಿ 2011ರಲ್ಲಿ ಜನಗಣತಿಯು ಹಳೆಯ ಮ್ಯಾನುವೆಲ್ ಪದ್ಧತಿಯಲ್ಲಿ ನಡೆದಿತ್ತು. ಆದರೆ, ಈ ಬಾರಿ 2027ರ ಜನಗಣತಿಯು ಸಂಪೂರ್ಣವಾಗಿ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಮೋಡ್ನಲ್ಲಿ ನಡೆಯಲಿದೆ. ಡಿಜಿಟಲ್ ಮೋಡ್ನಲ್ಲಿ ನಡೆಯುವ ಜನಗಣತಿಯು ನಿಖರತೆ ಹಾಗೂ ಪಾರದರ್ಶಕತೆಯಿಂದ ಕೂಡಿರಲಿದೆ. ಇದರಿಂದ ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಸಾಧ್ಯವಾಗಲಿದೆ. ಹಾಗಾಗಿ ಜಿಲ್ಲಾ ಹಂತದ ಅಧಿಕಾರಿಗಳು, ನಗರ, ಸ್ಥಳೀಯ ಸಂಸ್ಥೆ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳಿಗೆ ಪೂರ್ವಭಾವಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

2027ರ ಜನಗಣತಿಯು ಎರಡು ಹಂತಗಳಲ್ಲಿ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಮೊದಲ ಹಂತದಲ್ಲಿ ಕರ್ನಾಟಕದಲ್ಲಿ ಮನೆಪಟ್ಟಿ ಕಾರ್ಯಾಚರಣೆಯು 2026ರ ಏಪ್ರಿಲ್ 16 ರಿಂದ ಮೇ 15ರ ವರೆಗೆ ಒಂದು ತಿಂಗಳ ಕಾಲ ನಡೆಯಲಿದೆ. ಈ ಮೂವತ್ತು ದಿನಗಳ ಮನೆಪಟ್ಟಿ ಕಾರ್ಯ ಪ್ರಾರಂಭವಾಗುವ ಹದಿನೈದು ದಿನಗಳ ಮೊದಲು ಸ್ವಯಂ ಗಣತಿಯ ಆಯ್ಕೆ ಲಭ್ಯವಿರುತ್ತದೆ. ಎರಡನೇ ಹಂತದ ಜನಗಣತಿಯು 2027ರ ಫೆಬ್ರುವರಿಯಿಂದ ಆರಂಭವಾಗಲಿದೆ. ಈ ಬಾರಿಯ ಜನಗಣತಿಯಲ್ಲಿ ಎಲ್ಲ ಅಧಿಕಾರಿಗಳು ಪ್ರಮಾಣಿಕವಾಗಿ ಕಾರ್ಯನಿರ್ವಹಿಸಿ, ಜನಗಣತಿಯಲ್ಲಿ ಜಿಲ್ಲೆಗೆ ಮೊದಲ ಸ್ಥಾನ ತರುವಲ್ಲಿ ಶ್ರಮಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಮಾತನಾಡಿ, 2027ರ ಜನಗಣತಿ ಕಾರ್ಯವನ್ನು ನಿಗದಿತ ಸಮಯದಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಬೇಕಾಗಿರುವುದರಿಂದ ಕಾಲ ಕಾಲಕ್ಕೆ ಕೈಗೊಳ್ಳಬೇಕಾಗಿರುವ ವಿವಿಧ ಕಾರ್ಯಗಳಾದ ಫೀಲ್ಡ್ ಟ್ರೇನರ್ಗಳ ನೇಮಕಾತಿ ಮತ್ತು ತರಬೇತಿ, ಮನೆ ಪಟ್ಟಿ ಬ್ಲಾಕ್ ಮತ್ತು ಸೂಪರ್ವೈಸರಿ ಸರ್ಕಲ್ಗಳ ರಚನೆ, ಎನುಮರೇಟರ್ ಮತ್ತು ಮೇಲ್ವಿಚಾರಕರ ನೇಮಕಾತಿ ಮತ್ತು ತರಬೇತಿ, ಹೌಸ್ ಲಿಸ್ಟಿಂಗ್ ಹಾಗೂ ಇತರೆ ಕಾರ್ಯಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವ ಬಗ್ಗೆ ಮೇಲ್ವಿಚಾರಣೆ ಮಾಡಲು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಗರ, ಸ್ಥಳೀಯ ಸಂಸ್ಥೆ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande