
ವಿಜಯಪುರ, 10 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಮತಕ್ಷೇತ್ರದ ಕೊರಹಳ್ಳಿ–ಬಳಗಾನೂರ ಗ್ರಾಮದ ನಡುವೆ ಸುಮಾರು 3 ಕಿ.ಮೀ. ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾಗಿದೆ.
ಈ ಕಾಮಗಾರಿಗೆ ಒಟ್ಟು 5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ರಸ್ತೆ ಅಭಿವೃದ್ಧಿ ಕಾರ್ಯವು ಪ್ರಗತಿಯಲ್ಲಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಕಾರ್ಯ ನಡೆಯುತ್ತಿದೆ. ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡ ಬಳಿಕ ಸ್ಥಳೀಯ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಈ ರಸ್ತೆ ಅಭಿವೃದ್ಧಿ ಕಾರ್ಯದಿಂದ ಕೊರಹಳ್ಳಿ, ಬಳಗಾನೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸಂಪರ್ಕ ಸುಲಭವಾಗುವುದಲ್ಲದೆ, ಸಾರಿಗೆ ವ್ಯವಸ್ಥೆಯೂ ಮತ್ತಷ್ಟು ಸುಧಾರಣೆಯಾಗಲಿದೆ ಎಂದು ಅವರು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande