ಶಿವಾಜಿ ಮೂರ್ತಿ ಪ್ರತಿಷ್ಠಾಪನೆಯಲ್ಲಿ ರಾಜಕೀಯ: ಶಾಂತಗೌಡ ಪಾಟೀಲ್
ಬಾಗಲಕೋಟೆ, 10 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಬಸವೇಶ್ವರರ ಮೂರ್ತಿ ಪ್ರತಿಷ್ಠಾಪನೆಗೆ ಅನುದಾನ ಬೇಕಿಲ್ಲ, ಸರ್ಕಾರದಿಂದ ಕೇವಲ ಅನುಮತಿ ನೀಡಿದರೆ ಸಾಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ತಿಳಿಸಿದ್ದಾರೆ. ನಗರದ ಪತ್ರಿಕಾಗೋಷ್ಠಿಯಲ್ಲ
Status fight


ಬಾಗಲಕೋಟೆ, 10 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಬಸವೇಶ್ವರರ ಮೂರ್ತಿ ಪ್ರತಿಷ್ಠಾಪನೆಗೆ ಅನುದಾನ ಬೇಕಿಲ್ಲ, ಸರ್ಕಾರದಿಂದ ಕೇವಲ ಅನುಮತಿ ನೀಡಿದರೆ ಸಾಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ತಿಳಿಸಿದ್ದಾರೆ.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಹೊಳೆಬಸು ಶೆಟ್ಟರ ಅವರು ಮೂರ್ತಿ ಪ್ರತಿಷ್ಠಾಪನೆಗೆ ಅನುದಾನ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಶಾಂತಗೌಡ ಪಾಟೀಲ್, ಸಮಾಜದ ಮಹನೀಯರ ಮೂರ್ತಿ ಪ್ರತಿಷ್ಠಾಪನೆಗಾಗಿ ಸಾರ್ವಜನಿಕರ ಸಹಕಾರದಿಂದಲೇ ಕಾರ್ಯ ನೆರವೇರಿಸಲು ಸಾಧ್ಯವಿದೆ.

ಸರ್ಕಾರದಿಂದ ಹಣಕಾಸಿನ ನೆರವಿಗಿಂತ ಅನುಮತಿ ನೀಡುವುದು ಮುಖ್ಯ ಎಂದು ಹೇಳಿದರು.

ಶಿವಾಜಿ ಮಹಾರಾಜರು ಮತ್ತು ಬಸವೇಶ್ವರರು ದೇಶದ ಇತಿಹಾಸ ಮತ್ತು ಸಮಾಜ ಪರಿವರ್ತನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಮಹನೀಯರು. ಅವರ ಮೂರ್ತಿಗಳನ್ನು ಸ್ಥಾಪಿಸುವುದು ಜನರ ಭಾವನೆಗಳಿಗೆ ಸಂಬಂಧಿಸಿದ ವಿಷಯವಾಗಿದ್ದು, ಸರ್ಕಾರವು ಇದಕ್ಕೆ ಅಗತ್ಯ ಅನುಮತಿ ನೀಡಬೇಕು ಎಂದು ಅವರು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande