ಅಂತಾರಾಷ್ರ್ರೀಯ ಮಹಿಳಾ ದಿನಾಚರಣೆ : ಗ್ಯಾರಂಟಿಗಳ ಅರಿವು
ಕೊಪ್ಪಳ, 10 ಮಾರ್ಚ್ (ಹಿ.ಸ.) ಆ್ಯಂಕರ್: ಕೊಪ್ಪಳ ತಾಲೂಕು ಪಂಚಾಯತ್ ವತಿಯಿಂದ ಅಂತಾರಾಷ್ರ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಮಾರ್ಚ್ 11 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತ ಸಭಾ ಭವನದಲ್ಲಿ ಆಯೋಜಿಸಲಾಗಿದ
ಅಂತಾರಾಷ್ರ್ರೀಯ ಮಹಿಳಾ ದಿನಾಚರಣೆ : ಗ್ಯಾರಂಟಿಗಳ ಅರಿವು


ಕೊಪ್ಪಳ, 10 ಮಾರ್ಚ್ (ಹಿ.ಸ.)

ಆ್ಯಂಕರ್: ಕೊಪ್ಪಳ ತಾಲೂಕು ಪಂಚಾಯತ್ ವತಿಯಿಂದ ಅಂತಾರಾಷ್ರ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಮಾರ್ಚ್ 11 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತ ಸಭಾ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸಿಕೊಳ್ಳುವರು. ಕಾರ್ಯಕ್ರಮಕ್ಕೆ ಐದು ಗ್ಯಾರಂಟಿ ಯೋಜನೆಗಳ ಅರಿವು ಮೂಡಿಸಲು ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯೊಂದಿಗೆ ಮತ್ತು ಮಹಿಳಾ ಫಲಾನುಭವಿಗಳೊಂದಿಗೆ ಕಾರ್ಯಕ್ರಮದಲ್ಲಿ ಹಾಜರಾಗಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande