ಅತ್ಯಾಚಾರ ಆರೋಪಿಗೆ ೨೦ ವರ್ಷ ಜೈಲು ಶಿಕ್ಷೆ
ಯಲಬುರ್ಗಾ, 10 ಮಾರ್ಚ್ (ಹಿ.ಸ.) ಆ್ಯಂಕರ್: ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ವಜ್ರಬಂಡಿ ಗ್ರಾಮದ ಮಂಜುನಾಥ ಚಿಕ್ಕಗೌಡ್ರ ಇತನ ಮೇಲಿನ ಆರೋಪ ಸಾಬೀತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರ
ಅತ್ಯಾಚಾರ ಆರೋಪಿಗೆ ೨೦ ವರ್ಷ ಜೈಲು ಶಿಕ್ಷೆ


ಯಲಬುರ್ಗಾ, 10 ಮಾರ್ಚ್ (ಹಿ.ಸ.)

ಆ್ಯಂಕರ್: ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ವಜ್ರಬಂಡಿ ಗ್ರಾಮದ ಮಂಜುನಾಥ ಚಿಕ್ಕಗೌಡ್ರ ಇತನ ಮೇಲಿನ ಆರೋಪ ಸಾಬೀತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ [ಪೋಕ್ಸೊ] ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ. 70,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ವಜ್ರಬಂಡಿ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಧಿತಳಿಗೆ ಮಂಜುನಾಥ ಚಿಕ್ಕಗೌಡ್ರ ಇತನು 3 ವರ್ಷಗಳಿಂದ ಪ್ರೀತಿಸುತ್ತಿದ್ದು, ಪ್ರೀತಿಸುವ ವಿಷಯ ಬಾಧಿತಳ ಮನೆಯಲ್ಲಿ ಗೊತ್ತಾಗಿ ಮಂಜುನಾಥನಿಗೆ ಬೈದು ಬುದ್ದಿವಾದ ಹೇಳಿದರೂ ಸಹ ದಿ: 17-03-2024ರ ರಾತ್ರಿ 9 ಗಂಟೆಗೆ ವಜ್ರಬಂಡಿ ಗ್ರಾಮದ ಗೋಡೌನ್ ಹತ್ತಿರ ಬಾಧಿತಳಿಗೆ ಕರೆಯಿಸಿಕೊಂಡು ತನ್ನ ಮೋಟಾರ ಸೈಕಲ್ ಮೇಲೆ ಕೂಡಿಸಿಕೊಂಡು ಹೊಸಪೇಟೆಗೆ ಹೋಗಿ ಅಲ್ಲಿ ಮೋಟಾರ ಸೈಕಲ್ ಬಿಟ್ಟು ಬಸ್ ಮೂಲಕ ಬೆಂಗಳೂರು ಹಾಗೂ ಮೈಸೂರು ಕಡೆಗಳಲ್ಲಿ ತಿರುಗಾಡಿ ಹೊಸಪೇಟೆಗೆ ಬಂದು ಅದೇ ಬೈಕ್ನಲ್ಲಿ ಕೊಪ್ಪಳಕ್ಕೆ ಬಂದು ಪಾರ್ಥ ಲಾಡ್ಜ್ನಲ್ಲಿ ತಾವು ಅಣ್ಣ ತಂಗಿ ಎಂದು ಸುಳ್ಳು ಹೇಳಿ ರೂಮ್ ಪಡೆದುಕೊಂಡು ರೂಮಿನಲ್ಲಿ ಬಾಧಿತಳು ಬೇಡವೆಂದರೂ ಬಾಧಿತಳಿಗೆ ಬಲಾತ್ಕಾರದಿಂದ ಲೈಂಗಿಕ ಅತ್ಯಾಚಾರ ಮಾಡಿರುತ್ತಾನೆ.

ನಂತರದಲ್ಲಿ ಹೊಸಪೇಟೆ ದಾರಿಯಲ್ಲಿ ಕಲ್ಯಾಣಿ ಫ್ಯಾಕ್ಟರಿ ಗುಡ್ಡದ ಹತ್ತಿರ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಯಲಬುರ್ಗಾ ಪೊಲೀಸ್ ಠಾಣೆಯ ಪಿಎಸ್ಐ ವಿಜಯಪ್ರತಾಪ ಅವರು ದೂರು ಸ್ವೀಕರಿಸಿ ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿ, ಕೊಪ್ಪಳ ಡಿಎಸ್ಪಿ ಮುತ್ತಣ್ಣ ಸವರಗೋಳ ಹಾಗೂ ಸಿದ್ದಲಿಂಗಪ್ಪಗೌಡ ಪಾಟೀಲ ಅವರು ಮುಂದಿನ ತನಿಖೆಯನ್ನು ನಿರ್ವಹಿಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಡಿಎಸ್ಪಿ ಕಛೇರಿಯ ಸಿಎಚ್ಸಿ ಶಿವಕುಮಾರ ಅವರು ತನಿಖಾ ಸಹಾಯಕ ಕರ್ತವ್ಯ ನಿರ್ವಹಿಸಿರುತ್ತಾರೆ.

ಈ ಪ್ರಕರಣವು ಸ್ಪೇ.ಎಸ್ಸಿ(ಪೋಕ್ಸೊ) ಸಂ: 24/2024ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿತನ ಮೇಲಿನ ಆರೋಪಣೆಗಳು ಸಾಭೀತಾಗಿದ್ದರಿಂದ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ. 70,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರು ರ್ಮಾ 5 ರಂದು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು.

ಯಲಬುರ್ಗಾ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ವಿಜಯಲಕ್ಷ್ಮೀ ಇವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ (ಪೋಕ್ಸೊ) ಕಾರ್ಯಾಲಯ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande