
ವಿಜಯಪುರ, 10 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾತಲಗಾಂವ ಗ್ರಾಮದಲ್ಲಿ 1.46 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸುಸಜ್ಜಿತ ಸರ್ಕಾರಿ ಪ್ರೌಢಶಾಲೆ ಕಟ್ಟಡವನ್ನು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಉದ್ಘಾಟಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಕಲಿಕೆಯ ಜೊತೆಯಲ್ಲಿ ಪ್ರಾಯೋಗಿಕ ಅನುಭವ ನೀಡುವ ಉದ್ದೇಶದೊಂದಿಗೆ ಸುಸಜ್ಜಿತ ಪ್ರಯೋಗಾಲಯಗಳು, ಗ್ರಂಥಾಲಯ ಹೀಗೆ ಎಲ್ಲವನ್ನೂ ಒಳಗೊಂಡ ಸರ್ಕಾರಿ ಶಾಲೆ ಇದಾಗಿದೆ ಎಂದು ತಿಳಿಸಿದರು.
ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ, ವಿದ್ಯುತ್ ಸೌಕರ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನೂ ಒದಗಿಸಲಾಗಿದೆ ಎಂದು ಶಾಸಕರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande