ಸಮಾಜ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವದಿ ವಿಸ್ತರಣೆ
ಬಳ್ಳಾರಿ, 10 ಮಾರ್ಚ್ (ಹಿ.ಸ.) ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಂದ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬ
ಸಮಾಜ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವದಿ ವಿಸ್ತರಣೆ


ಬಳ್ಳಾರಿ, 10 ಮಾರ್ಚ್ (ಹಿ.ಸ.)

ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಂದ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.15 ರ ವರೆಗೆ ವಿಸ್ತರಿಸಲಾಗಿದೆ.

ಏ.05 ರಂದು ಡಾ.ಬಾಬು ಜಗಜೀವನರಾಂ ಅವರ 119ನೇ ಹಾಗೂ ಏ.14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮೇಲ್ಕಂಡ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande